ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಅವೈಜ್ಞಾನಿಕ ಗ್ಯಾರಂಟಿಯಿಂದ ಕರ್ನಾಟಕ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ. ಈ ಸತ್ಯವನ್ನು ಸ್ವತಃ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರೇ ಬಹಿರಂಗ ಪಡಿಸಿದ್ದಾರೆ ಎಂದು ಜೆಡಿಎಸ್ ವಿಡಿಯೋ ಪ್ರದರ್ಶಿಸಿ ಟ್ವೀಟ್ ಮಾಡಿದೆ.
ಗ್ಯಾರಂಟಿ ಹೆಸರಲ್ಲಿ ರಾಜ್ಯದ ಜನರಿಗೆ ಯಾಮಾರಿಸುತ್ತಾ ಸರ್ಕಾರದ ಖಜಾನೆ ಖಾಲಿಮಾಡಿರುವ ಸಿದ್ದರಾಮಯ್ಯ ಸರ್ಕಾರಕ್ಕೆ, ಖರ್ಗೆ ಸಾಹೇಬರೇ ಮಾತಿನ ಮೂಲಕ ತೀಕ್ಷ್ಣವಾಗಿ ತಿವಿದಿದ್ದಾರೆ ಎಂದು ಜೆಡಿಎಸ್ ಹೇಳಿದೆ.
ಇದೇ ಸಂದರ್ಭದಲ್ಲಿ ಖರ್ಗೆಯವರು ಕಿವಿಮಾತು ಹೇಳುತ್ತಿರುವಾಗ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನಡೆದುಕೊಂಡ ರೀತಿ ಹಿರಿಯ ದಲಿತ ನಾಯಕನಿಗೆ ಮಾಡಿದ ಅವಮಾನ ಎಂದು ಜೆಡಿಎಸ್ ಆರೋಪಿಸಿದೆ.
ಸುಳ್ಳುಗಳಿಗೆ ಆಯಸ್ಸು ಕಮ್ಮಿ… ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನೀವು ಎಷ್ಟೇ ತಿಪ್ಪೆ ಸಾರಿದರೂ ಸತ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ ಎಂದು ಜೆಡಿಎಸ್ ಹೇಳಿದೆ.