ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರ ಜಾಮೀನು ರದ್ದು ಮಾಡಬೇಕೆಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ರಾಜಕೀಯ ಹೋರಾಟಗಳಿಗೆ ನ್ಯಾಯಾಲಯವನ್ನು ವೇದಿಕೆ ಮಾಡಿಕೊಳ್ಳಬೇಡಿ ಎಂದು ನ್ಯಾಯಪೀಠ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿರುವುದು ದ್ವೇಷ ರಾಜಕಾರಣ ಮಾಡುತ್ತಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರಗೆ ಕಪಾಳಮೋಕ್ಷ ಮಾಡಿದಂತಿದೆ.

