ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹತ್ತನೆ ತರಗತಿ ಮಕ್ಕಳಿಗೆ ಪರೀಕ್ಷೆ ಭಯ ಹೋಗಲಾಡಿಸುವುದಕ್ಕಾಗಿ ಟ್ಯೂಷನ್ ಕ್ಲಾಸ್ ನಡೆಸಲಾಗುತ್ತಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಿರಿಗೆರೆ ಯೋಜನಾ ಕಚೇರಿ ವ್ಯಾಪ್ತಿಯ ಯೋಜನಾಧಿಕಾರಿ ರವೀಂದ್ರ ಹೇಳಿದರು.
ಮುದ್ದಾಪುರ ಕಾರ್ಯಕ್ಷೇತ್ರದ ಸರ್ಕಾರಿ ಹಿರಿಯ ಪ್ರೌಢಶಾಲೆಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟಿಸಿ ಮಾತನಾಡಿದ ರವೀಂದ್ರ ಶ್ರೀಕ್ಷೇತ್ರ ಧರ್ಮಸ್ಥಳದ ಹೇಮಾವತಿ ಹೆಗಡೆರವರ ಆಸೆಯಂತೆ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ೧೦ ನೇ ತರಗತಿ ಮಕ್ಕಳಿಗೆ ಟ್ಯೂಷನ್ ಕ್ಲಾಸ್ ಆರಂಭಿಸಲಾಗಿದೆ.
ಮಕ್ಕಳಲ್ಲಿ ಪರೀಕ್ಷೆಯ ಭಯ ಹೋಗಲಾಡಿಸುವುದು ಇದರ ಉದ್ದೇಶ. ಹತ್ತನೆ ತರಗತಿಯ ನಂತರ ಮಕ್ಕಳ ಶಿಕ್ಷಣಕ್ಕೆ ನೆರವಾಗುವುದಕ್ಕಾಗಿ ವೃತ್ತಿಪರ ಕೋರ್ಸ್‌ಗಳಿಗೆ ಸುಜ್ಞಾನ ನಿಧಿಯನ್ನು ನೀಡಲಾಗುವುದು. ಅನೇಕ ಶಾಲೆಗಳಿಗೆ ಡೆಸ್ಕ್ ಬೆಂಚಗಳನ್ನು ನೀಡಲಾಗಿದೆ.
ಶಿಕ್ಷಕರುಗಳ ಕೊರತೆಯಿರುವ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರುಗಳನ್ನು ನೇಮಕ ಮಾಡಲಾಗುತ್ತದೆ. ಇವೆಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಮಕ್ಕಳಿಗೆ ತಿಳಿಸಿದರು.
ಮುಖ್ಯ ಶಿಕ್ಷಕಿ ಲಲಿತಾ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳ, ಜ್ಞಾನವಿಕಾಸ ಸಮನ್ವಯಾಧಿಕಾರಿ ಶಿವಲೀಲಾ ಎಸ್.ಬಾಗೋಡಿ, ಕಾಂತಮ್ಮ, ರೂಪ, ನವೀನ, ಶಿಕ್ಷಕ ವೃಂದದವರು, ಮಕ್ಕಳು ಟ್ಯೂಷನ್ ಕ್ಲಾಸ್ ಉದ್ಘಾಟನೆಯಲ್ಲಿ ಭಾಗವಹಿಸಿದ್ದರು.