ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಅನ್ನು ಕೈಗೊಳ್ಳುವ ಸಂಬಂಧ ಮುಖ್ಯ ಚುನಾವಣಾಧಿಕಾರಿಗಳು ವಿಡಿಯೋ ಸಂವಾದದ ಮೂಲಕ ಶನಿವಾರ ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿಗಳು, ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳು ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಕ್ಷೇತ್ರ ಕಾರ್ಯ ಕೈಗೊಳ್ಳುವ ಕುರಿತು ವಿವರವಾದ ತರಬೇತಿ ನೀಡಲಾಯಿತು.
ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಜಿಲ್ಲೆಯಲ್ಲಿಯೂ ಕೈಗೊಳ್ಳಬೇಕಿದ್ದು, ಈ ನಿಟ್ಟಿನಲ್ಲಿ ಮತದಾರರ ನೊಂದಣಾಧಿಕಾರಿಗಳು, ಸಹಾಯಕ ನೊಂದಣಾಧಿಕಾರಿಗಳು ಅಗತ್ಯ ಮಾಹಿತಿಯನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಹಾಗೂ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಮತದಾರರ ನೋಂದಣಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ಮೊಳಕಾಲ್ಮುರು, ಹಿರಿಯೂರು ವಿಧಾನಸಭಾ ಕ್ಷೇತ್ರ ಮತದಾರರ ನೋಂದಣಾಧಿಕಾರಿ ಹಾಗೂ ರೈಲ್ವೆ ಯೋಜನೆ ವಿಶೇಷ ಭೂ ಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ್, ಚಳ್ಳಕೆರೆ ವಿಧಾನಸಭಾ ಕ್ಷೇತ್ರ ಮತದಾರರ ನೋಂದಣಾಧಿಕಾರಿ ಹಾಗೂ
ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಹೊಸದುರ್ಗ ವಿಧಾನಸಭಾ ಕ್ಷೇತ್ರ ಮತದಾರರ ನೋಂದಣಾಧಿಕಾರಿ ಹಾಗೂ ಎನ್.ಹೆಚ್-48 ಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿ ಹೆಚ್.ಎನ್.ಚಂದ್ರಕುಮಾರ್, ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ ಮತದಾರರ ನೋಂದಣಾಧಿಕಾರಿ ಹಾಗೂ
ಭದ್ರಾ ಮೇಲ್ದಂಡೆ ಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿ ಟಿ.ಸುರೇಶ್ ಕುಮಾರ್ ಸೇರಿದಂತೆ ಜಿಲ್ಲೆ ಎಲ್ಲ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ತಹಶೀಲ್ದಾರರು ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಗಳು ಮತ್ತು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು.

