ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಪ್ರಯುಕ್ತ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಲ್ಹೋಟ್ ಅವರು ರಾಜಭವನದಲ್ಲಿ ಶಸ್ತ್ರಾಸ್ತ್ರಗಳಿಗೆ ವಿಶೇಷ ಪೂಜೆ ಸಲ್ಲಿಸಿದರು.
ಆಯುಧ ಪೂಜೆ ಅಂಗವಾಗಿ ರಾಜಭವನದ ವಾಹನಗಳಿಗೆ ಪೂಜೆ ಸಲ್ಲಿಸಿ, ಆವರಣದಲ್ಲಿ ರಾಜಭವನದ ಪೊಲೀಸ್ ಗಾರ್ಡ್ ಭದ್ರತಾ ಸಿಬ್ಬಂದಿಯ ಶಸ್ತ್ರಾಸ್ತ್ರಗಳನ್ನು ಇರಿಸಿ ಪೂಜೆ ನೆರವೇರಿಸಿದರು. ನಂತರ ಎಲ್ಲರಿಗೂ ಶುಭ ಕೋರಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

