ಭಾರತೀಯ ಸೇನೆಯ ಹೆಸರಿನಲ್ಲಿ ಮಸೀದಿಗಳಲ್ಲಿ ಮೇ-9ರ ಶುಕ್ರವಾರ ವಿಶೇಷ ಪ್ರಾರ್ಥನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಪರೇಷನ್ ಸಿಂಧೂರ ಕಾರ್ಯಚರಣೆ ಹಿನ್ನೆಲೆಯಲ್ಲಿ ಕರ್ನಾಟಕದ ಮುಜರಾಯಿ ಇಲಾಖಾ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ.

ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಆಪರೇಷನ್ ಸಿಂಧೂರದ ಭಾಗವಾಗಿ ಎಲ್ಲಾ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲು ಸೂಚನೆ ನೀಡಿದ್ದಾರೆ.

ಭಾರತೀಯ ಸೇನೆಯ ಹೆಸರಿನಲ್ಲಿ ವಿಶೇಷ ಪೂಜೆ ಮಾಡಲು ಧಾರ್ಮಿಕ ‌ದತ್ತಿ‌ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.
ವಕ್ಫ್
& ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಸಂದೇಶ ರವಾನಿಸಿದ್ದಾರೆ. ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.

ಈ ನಿಟ್ಟಿನಲ್ಲಿ ನಮ್ಮ ದೇಶದ ಮೂರು ಸಶಸ್ತ್ರ ಪಡೆಗಳ ಸೈನಿಕರಿಗೆ ಕೃತಜ್ಞತೆ ಸಲ್ಲಿಸಲು ರಾಜ್ಯಾದ್ಯಂತ ಎಲ್ಲಾ ಮಸೀದಿಗಳಲ್ಲಿ ಮೇ-9ರ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಸಚಿವ ಬಿ ಝಡ್ ಜಮೀರ್ ಅಹ್ಮದ್ ಅವರು ವಕ್ಫ್ ಬೋರ್ಡ್ ಸಿಇಒಗೆ ಪತ್ರದ ಮೂಲಕ ಸೂಚನೆ ನೀಡಿದ್ದಾರೆ.

ಪಹಲ್ಗಾಮ್​ನಲ್ಲಿ ಉಗ್ರರ ದಾಳಿ ಹಿನ್ನೆಲೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತದ ಸೈನಿಕರ ಶ್ರೇಯಸ್ಸು ಮತ್ತು ಶಕ್ತಿ ತುಂಬಲು ವಕ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿ ಎಲ್ಲಾ ಮಸೀದಿಗಳಲ್ಲಿ ಇಂದು ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ತಿಳಿಸಲಾಗಿದೆ.

ರಾಜ್ಯದ ಮುಜುರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಭಾರತೀಯ ಸೇನೆ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಸುತ್ತೋಲೆ ಹೊರಬಿದ್ದ ಬೆನ್ನಲ್ಲೇ ಮಸ್ಲಿಮರಿಗೂ ಸಹ ಮಸೀದಿಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಹೇಳಬೇಕೆಂಬ ಕೂಗು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಇಂತಹದೊಂದು ಸೂಚನೆ ನೀಡಿದ್ದು ಮೆಚ್ಚುಗೆಗೆ ಕಾರಣವಾಗಿದೆ.

Share This Article
error: Content is protected !!
";