ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಶ್ರಾವಣ ಮಾಸದ ಮಂಗಳವಾರದಂದು ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮನಿಗೆ ವಿಶೇಷವಾಗಿ ಅಲಂಕರಿಸಿ ಶ್ರದ್ದಾ ಭಕ್ತಿಯಿಂದ ಪೂಜಿಸಲಾಯಿತು.
ಮಲ್ಲಿಗೆ ಸುಗಂಧರಾಜ, ಕನಕಾಂಬರ, ಗುಲಾಬಿ, ಸೇವಂತಿಗೆ, ಹಸಿರು ಪತ್ರೆಗಳಿಂದ ಕಣಿವೆಮಾರಮ್ಮನನ್ನು ಸಿಂಗರಿಸಲಾಗಿತ್ತು.
ಬೆಳಗಿನಿಂದ ಸಂಜೆಯತನಕ ನೂರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಕಣಿವೆಮಾರಮ್ಮನ ಅಲಂಕಾರವನ್ನು ಕಣ್ತುಂಬಿಕೊಂಡರು.

