ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮೊಳಕಾಲ್ಮೂರು ತಾಲೂಕಿನ ಚಿಕ್ಕುಂತಿ ಗ್ರಾಮದ ಹಿರಿಯ ಹಗಲು ವೇಷ ಕಲಾವಿದ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಎ.ಶ್ರೀನಿವಾಸ್ ಅವರಿಗೆ ಚಿತ್ರದುರ್ಗ ಗಂಡುಗಲಿ ಪಾಳೇಗಾರರ ಸಂಸ್ಥಾನದ ದುರ್ಗದ ಶ್ರೀ ಕಲಾ ಸಂಘದ ವತಿಯಿಂದ ನೀಡುವ ದುರ್ಗದ ಸಿರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ದುರ್ಗದ ಸಿರಿ ಕಲಾ ಸಂಘದ ಸದಸ್ಯರು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದೇ ಮಾರ್ಚ್ 23 ರಂದು ಭಾನುವಾರ ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನವನ್ನು ಮೈಸೂರು ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಮೈಸೂರು ಮಹಾರಾಜರಾದ ಯಧುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಇವರ ಅಮೃತ ಹಸ್ತದಿಂದ ನೀಡಲಿದ್ದಾರೆ.
ಈ ಸಮಾರಂಭದಲ್ಲಿ ದಾವಣಗೆರೆಯ ಪೂರ್ವ ವಲಯದ ಆರಕ್ಷಕ ಮಹಾ ನಿರೀಕ್ಷಕರಾದ ರವಿಕಾಂತೇಗೌಡ, ಬಹು ಭಾಷೆ ನಟಿ ಭಾರತಿ ವಿಷ್ಣುವರ್ಧನ್, ಹಿರಿಯ ನಟ ದೊಡ್ಡಣ್ಣ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಇವರಿಗಳು ಸೇರಿ ಸಮಾರಂಭದಲ್ಲಿ ಪ್ರಶಸ್ತಿ ನೀಡಲು ಆಗಮಿಸುತ್ತಾರೆ ಎಂದು ದುರ್ಗದ ಸಿರಿ ಸಂಘದವರು ಪತ್ರಿಕೆ ಮಾಧ್ಯಮದ ಮೂಲಕ ತಿಳಿಸಿದ್ದಾರೆ.