ರಸ್ತೆಯಲ್ಲಿನ ಗುಂಡಿ ತಪ್ಪಿಸಲು ಹೋಗಿ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿನಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಬೂದಿಗೆರೆ ಕ್ರಾಸ್‌ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ.

ವಿದ್ಯಾರ್ಥಿನಿ ಧನುಶ್ರೀ(22) ಅವರು ಕಾಲೇಜಿಗೆ ಸ್ಕೂಟಿಯಲ್ಲಿ ಹೋಗುತ್ತಿರುವಾಗ ರಕ್ಕಸ ರಸ್ತೆ ಗುಂಡಿಗೆ ಈ ಅಪಘಾತ ಸಂಭವಿಸಿದ್ದು, ರಸ್ತೆ ಗುಂಡಿ ತಪ್ಪಿಸಲು ಹೋಗಿ ಟಿಪ್ಪರ್‌ಧನುಶ್ರೀಯ ಸ್ಕೂಟಿಗೆ ಡಿಕ್ಕಿ ಹೊಡೆದಿದೆ.

- Advertisement - 

ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ಆಕೆ ಕೆಳಗೆ ಬಿದ್ದಿದ್ದು, ಆಕೆಯ ಮೇಲೆಯೇ ಟಿಪ್ಪರ್‌ಹರಿದು ಹೋಗಿ ಸ್ಥಳದಲ್ಲಿಯೇ ವಿದ್ಯಾರ್ಥಿನಿ  ಧನುಶ್ರೀ ಸಾವನ್ನಪ್ಪಿದ್ದಾಳೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

 

- Advertisement - 

 

Share This Article
error: Content is protected !!
";