ವಿಜ್ಞಾನ ವಿಭಾಗದಲ್ಲಿ 600ಕ್ಕೆ 599 ಅಂಕ ಪಡೆದ ವಿದ್ಯಾರ್ಥಿನಿ ಅಮೂಲ್ಯ ಕಾಮತ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು
, ಕಲಾ, ವಾಣಿಜ್ಯ, ವಿಜ್ಞಾನ ಮೂರೂ ವಿಭಾಗಗಳಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಕ್ಸ್‌ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ 600ಕ್ಕೆ 599 ಅಂಕ ಪಡೆಯುವ ಮೂಲಕ ಅಮೂಲ್ಯ ಕಾಮತ್ ಕರ್ನಾಟಕಕ್ಕೆ ಟಾಪರ್ ಆಗಿದ್ದಾರೆ.

ಅಮೂಲ್ಯ ಕಾಮತ್ ಮಾಧ್ಯಮಗಳೊಂದಿಗೆ ಮಾತನಾಡಿ ರ‍್ಯಾಂಕ್ ಬರುವ ನಿರೀಕ್ಷೆ ಇತ್ತು. ಕಾಲೇಜಿನ ಉಪನ್ಯಾಸಕರೂ ರ‍್ಯಾಂಕ್ ನಿನ್ನಿಂದ ಸಾಧ್ಯ ಎಂದು ಹೇಳುತ್ತಿದ್ದರು. ಪಿಯುಸಿಯ ವಿಜ್ಞಾನ ವಿಭಾಗದಲ್ಲಿ ಪಿಸಿಎಂಸಿ ಅಧ್ಯಯನ ಮಾಡಿರುವುದರಿಂದ ಮುಂದೆ ಇಂಜಿನಿಯರ್ ಆಗಬೇಕೆಂಬುದು ನನ್ನ ಬಯಕೆ. ಭರತ ನಾಟ್ಯದಲ್ಲಿ ಹಾಗೂ ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ತರಬೇತು ಪಡೆದಿದ್ದು, ಪುಸ್ತಕ ಓದುವುದೆಂದರೆ ತುಂಬಾ ಇಷ್ಟ ಎಂದು ಅಮೂಲ್ಯ ಕಮಾತ್ ಹೇಳಿದರು.

 

Share This Article
error: Content is protected !!
";