ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ:
ಕಾರು ಮತ್ತು ಟ್ರ್ಯಾಕ್ಟರ್ ಮಧ್ಯ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಚಿಕ್ಕ ಹೆಣ್ಣು ಮಕ್ಕಳು ಸೇರಿದಂತೆ ನಾಲ್ಕು ಮಂದಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಗೇಟ್ ಸಮೀಪದಲ್ಲಿ ಜರುಗಿದೆ.
ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ಅದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಬ್ರೆಝಾ ಕಾರು ಡಿಕ್ಕಿ ಹೊಡೆದಿದೆ. ಬ್ರೆಝಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 4 ಜನರು ಸಾವನ್ನಪ್ಪಿದ್ದಾರೆ. ಒಬ್ಬರು ಗಾಯಗೊಂಡಿದ್ದಾರೆ. ಚಿತ್ರಹಳ್ಳಿ ಗೇಟ್ ಪಿಎಸ್ ಮಿತಿಯಲ್ಲಿ ಮಾರಕ ಅಪಘಾತ ಸಂಭವಿಸಿದೆ.
ಮೃತಪಟ್ಟವರನ್ನು ಕಾವ್ಯ(24), ಗಂಗಮ್ಮ(50), ಹನ್ಸಿಕಾ(4) ಮತ್ತು ಮನಸ್ವಿನಿ(2) ಎಂದು ಗುರುತಿಸಲಾಗಿದೆ. ಯಶವಂತ(33) ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರೆಲ್ಲರೂ ಅರೆನಹಳ್ಳಿ ಗ್ರಾಮದವರು ಎನ್ನಲಾಗಿದೆ.