ಹಿರಿಯೂರು ಸಮೀಪ ಭೀಕರ ಅಪಘಾತ 4 ಮಂದಿ ಯುವಕರ ಸಾವು

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿರುವ ಘಟನೆ ಹಿರಿಯೂರು ತಾಲೂಕಿನ ಹಿಂಡಸಕಟ್ಟೆ ಸಮೀಪದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.

ಬೀದರ್-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿರುವಂತಹ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹಿಂಡಸಕಟ್ಟೆ ಗ್ರಾಮದಲ್ಲಿ ನಡೆದಿದೆ.

ವಿಶ್ವನಾಥ್(22), ನಂಜುಂಡಿ(23), ರಾಹುಲ್(23) ಮತ್ತು ಯಶ್ವಂತ್(22) ಮೃತರು ಎಂದು ಗುರುತಿಸಲಾಗಿದೆ.

ಮೃತರು ಹಿರಿಯೂರು ತಾಲೂಕಿನ ನಂಜಯ್ಯನ ಕೊಟ್ಟಿಗೆ ಗ್ರಾಮದವರು ಎನ್ನಲಾಗಿದೆ. ಹಿರಿಯೂರು ಗ್ರಾಮಾಂತರ ಠಾಣೆ ಸಿಪಿಐ ಆನಂದ್​ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

 

- Advertisement - 

Share This Article
error: Content is protected !!
";