ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ Science Communication: Strategies for Reaching Diverse Audiences ವಿಷಯದ ಕುರಿತು 2025 ನೇ ಆಗಸ್ಟ್ 5 ರಿಂದ 7 ರವರೆಗೆ ಮೂರು ದಿನಗಳ ಸರ್ಟಿಫಿಕೇಟ್ ಕೋರ್ಸ್ ಕಾರ್ಯಾಗಾರವನ್ನು ಪ್ರೊ.ಯು.ಆರ್.ರಾವ್ ವಿಜ್ಞಾನ ಭವನ, ತೋಟಗಾರಿಕೆ ವಿಜ್ಞಾನಗಳ ಕಾಲೇಜು ಮಹಾದ್ವಾರ, ಜಿ.ಕೆ.ವಿ.ಕೆ.ಆವರಣದಲ್ಲಿರುವ ಅಕಾಡೆಮಿಯ ಕಛೇರಿಯಲ್ಲಿ ಆಯೋಜಿಸಲಾಗಿದೆ.
ಕಾರ್ಯಾಗಾರದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಶೈಕ್ಷಣಿಕ ತಜ್ಞರು, ಭಾಗವಹಿಸಬಹುದಾಗಿದೆ. ಆಸಕ್ತ ಪ್ರತಿನಿಧಿಗಳು ಆಗಸ್ಟ್ 2 ರೊಳಗಾಗಿ ಗೂಗಲ್ ಫಾರಂ https://forms.gle/iyPn85smZ81RGGnf6 ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಾರ್ಯಾಗಾರದ ಸಂಯೋಜಕರಾದ ಶ್ರೀನಿವಾಸು ವಿ.ಕೆ. ಮೊ.ಸಂ: 9620767819 ಇವರನ್ನು ಸಂಪರ್ಕಿಸಬಹುದಾಗಿದೆ ಅಥವಾ ಅಕಾಡೆಮಿಯ ವೆಬ್‍ಸೈಟ್ https://kstacademy.in ನ್ನು ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.