ಮೂವರು ಯುವಕರ ಮೇಲೆ ಹರಿದ ರೈಲು

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಹಳ್ಳಿಯೊಂದರಲ್ಲಿ ಕಾರ್ಪೆಂಟರ್ ಕೆಲಸ ಮುಗಿಸಿಕೊಂಡು ರೈಲ್ವೆ ಟ್ರ್ಯಾಕ್ ಮೇಲೆ ನಡೆದುಕೊಂಡು ಬರುತ್ತಿದ್ದ ಮೂವರು ಯುವಕರ ಮೇಲೆ ರೈಲು ಹರಿದು ದಾರುಣವಾಗಿ ಮೂರು ಯುವಕರು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ನಗರದ ಮುತ್ತೂರು ಬಳಿ ನಡೆದಿದೆ.

- Advertisement - 

ರಾಹುಲ್, ಲಲ್ಲನ್ ಮತ್ತು ಬಿಕೇಶ್ ಎಂಬ ಮೂವರು ಯುವಕರು ಘಟನೆಯಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಮೂವರು ಯುವಕರು ಉತ್ತರ ಪ್ರದೇಶ ಮೂಲದವರಾಗಿದ್ದಾರೆ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದ್ದಾರೆ.

- Advertisement - 

ದೊಡ್ಡಬಳ್ಳಾಪುರ ನಗರದ ಮುತ್ತೂರಿನಲ್ಲಿ ವಾಸವಾಗಿದ್ದ ಮೃತ ಮೂವರು ಯುವಕರು ಕಾರ್ಪೆಂಟರ್ ಕೆಲಸ ಮಾಡುತ್ತಿದ್ದರು. ಕೊನ್ನಘಟ್ಟ ಗ್ರಾಮದಲ್ಲಿ ಕೆಲಸ ಮುಗಿಸಿದ ಮೂವರು ಸ್ನೇಹಿತರು ಜೊತೆಯಲ್ಲಿಯೇ ಆಟೋದಲ್ಲಿ ಬಂದು ಜಗದೀಶ್ ವೃತ್ತದಲ್ಲಿ ಇಳಿದಿದ್ದರು.

ಅಲ್ಲಿಂದ ಮನೆಗೆ ರೈಲ್ವೆ ಹಳೆಯ ಮೇಲೆ ನಡೆದುಕೊಂಡು ಬರುತ್ತಿದ್ದರು. ಈ ವೇಳೆ ಆಯತಪ್ಪಿ ರೈಲು ಹಳಿಗಳ ಮೇಲೆ ಬಿದ್ದಾಗ ಪುಟ್ಟಪರ್ತಿ-ಬೆಂಗಳೂರು ರೈಲು ಯುವಕರ ಮೇಲೆ ಹರಿದಿದೆ ಎಂದು ತಿಳಿದುಬಂದಿದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ಶವಗಾರಕ್ಕೆ ರವಾನೆ ಮಾಡಲಾಗಿದೆ.

- Advertisement - 

 

 

Share This Article
error: Content is protected !!
";