ವಿತರಕರ ಸಮ್ಮೇಳನ ಯಶಸ್ವಿಗೆ ಶ್ರಮಿಸಿದವರಿಗೆ ಸನ್ಮಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇಲ್ಲಿನ ಮುರುಘಾ ಮಠದ ಅನುಭವ ಮಂಟಪ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಸಂಘದ ಸಂಯುಕ್ತಾಶ್ರಯದಲ್ಲಿ ಭಾನುವಾರ ನಡೆದ ನಾಲ್ಕನೇ ರಾಜ್ಯ ಸಮ್ಮೇಳನ ಅದ್ದೂರಿಯಾಗಿ ನೆರವೇರಿತು.

 ರಾಜ್ಯದ ವಿವಿಧ ಭಾಗಗಳಿಂದ ಮೂರು ಸಾವಿರ ಪತ್ರಿಕಾ ವಿತರಕರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಚಾರ್ಯ ಮಹಾ ಸ್ವಾಮೀಜಿಗಳು ಸಾನಿಧ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ  ಕೆ ವಿ ಪ್ರಭಾಕರ್. ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್, ಶಾಸಕ ವೀರೇಂದ್ರ ಪಪ್ಪಿ
, ಸಂಸದ ಗೋವಿಂದ ಕಾರಜೋಳ, ಕಾರ್ಯನಿರಂತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ್ ತಗಡೂರು, ವಿ ಆರ್ ಎಲ್ ಸಾಮೋಹ ಸಂಸ್ಥೆ ಚೇರ್ಮನ್ ವಿಜಯ ಸಂಕೇಶ್ವರ್, ಸಂಪಾದಕ ಎನ್.ನಾಗಣ್ಣ, ಇನ್ನೂ ಅನೇಕ ಗಣ್ಯರು ಭಾಗವಹಿಸಿದ್ದರು.

 ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಮೂವತ್ತಕ್ಕಿಂತ ಅಧಿಕ ಪತ್ರಿಕಾ  ವಿತರಕರು ಭಾಗವಹಿಸಿದ್ದರು.
ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಮಾಲತೇಶ್, ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಗೌರವಾಧ್ಯಕ್ಷ ಮುಕ್ತಾರ್ ಅಹಮದ್(ನಜೀರ್), ಭದ್ರಾವತಿ ತಾಲೂಕ್ ಘಟಕದ ಅಧ್ಯಕ್ಷ ಜಿ.ಐ
.ಮಲ್ಲಿಕಾರ್ಜುನ್ ಇವರುಗಳನ್ನು ಸನ್ಮಾನಿಸಲಾಯಿತು.

ಸಮಾವೇಶ ಯಶಸ್ವಿಯಾಗಲು ಹಗಲಿರಳು ಸಹಕರಿಸಿದ ರಾಜ್ಯಾಧ್ಯಕ್ಷ ಕೆ. ಶಂಭುಲಿಂಗ, ಚಿತ್ರದುರ್ಗ ಜಿಲ್ಲಾ ಅಧ್ಯಕ್ಷ ತಿಪ್ಪೇಸ್ವಾಮಿ ಮತ್ತು ತಂಡದವರಿಗೂ ಜಿಲ್ಲೆಯ ಎಲ್ಲಾ ವಿತರಕ ಮಿತ್ರರಿಗೂ ಪರೋಕ್ಷ ಮತ್ತು ಪ್ರತ್ಯಕ್ಷವಾಗಿ ಸಹಕರಿಸಿದ ರಾಜ್ಯ ಒಕ್ಕೂಟದ ನಿರ್ದೇಶಕರಿಗೆ ಮತ್ತು ದಾನಿಗಳಿಗೆ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಅಭಿನಂದನೆಗಳನ್ನು ತಿಳಿಸಿದ್ದಾರೆ. 

- Advertisement -  - Advertisement -  - Advertisement - 
Share This Article
error: Content is protected !!
";