ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯ ಆವರಣದಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ-2025 ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭಾಗವಹಿಸಿ ಮಾತನಾಡಿದರು.
ಮೀನುಗಾರಿಕೆಗೆ ಉತ್ತೇಜನ ನೀಡುವ ಸಲುವಾಗಿ ಆಯೋಜಿಸಿರುವ ಮೂರು ದಿನಗಳ ಈ ಕಾರ್ಯಕ್ರಮವು ಹಲವು ವಿಶೇಷತೆಗಳಿಂದ ಕೂಡಿದೆ. ಮೌಲ್ಯವರ್ಧಿತ ಮೀನಿನ ಉತ್ಪನ್ನಗಳ ತಯಾರಿ, ಮಾರಾಟ, ರಫ್ತು ಮಾಡುವ ಉದ್ದೇಶದಿಂದ ಜನರಿಗೆ ಮೀನಿನ ವಿಶೇಷ ತಿಂಡಿಗಳನ್ನು ಈ ಸಲದ ಮತ್ಸ್ಯಮೇಳದಲ್ಲಿ ಪರಿಚಯಿಸಲಾಗಿದೆ ಎಂದು ಡಿಸಿಎಂ ಅವರು ಹೇಳಿದರು.
ರಾಜ್ಯ ಮೀನುಗಾರಿಕೆ ಇಲಾಖೆಗೆ ಸಂಬಂಧಿಸಿದ ಮಳಿಗೆ ಹತ್ತು ಹಲವು ಮಾಹಿತಿಗಳನ್ನು ತಿಳಿಸಿಕೊಡುತ್ತಿದೆ. ಇಲ್ಲಿ ಯೋಜನೆಗಳು ಅನುಷ್ಠಾನಗೊಂಡಿರುವ ಬಗ್ಗೆಯೂ ವಿಸ್ತೃತ ಮಾಹಿತಿ ಸಿಗಲಿದ್ದು, ಜೊತೆಗೆ ಗಮನ ಸೆಳೆಯುವಂತಹ ಮೀನುಗಾರಿಕೆಯಲ್ಲಿ ಬಳಸುವ ಸಾಧನಗಳನ್ನು ಮಳಿಗೆಯಲ್ಲಿ ವೀಕ್ಷಿಸಬಹುದಾಗಿದೆ.

ಮೀನುಗಾರನಿಗೆ ನಿತ್ಯ ಮೀನು ಸಿಗುವುದಿಲ್ಲ. ಕೆಲವೊಮ್ಮೆ ವಾರವಾದರೂ ಒಂದು ಮೀನು ಸಿಗುವುದಿಲ್ಲ. ಅಂತಹ ತಾಳ್ಮೆ ವೃತ್ತಿ ನಡೆಸುತ್ತಿರುವ ಮೀನುಗಾರರು ಶ್ರಮಜೀವಿಗಳು ಎಂದು ಅವರು ತಿಳಿಸಿದರು.

