ಮಂಗನ ಕಾಯಿಲೆಗೆ ಓರ್ವ ಮಹಿಳೆ ಬಲಿ

News Desk

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಕೆಲ ಭಾಗಗಳಲ್ಲಿ ಮಂಗನ ಕಾಯಿಲೆ ಭೀತಿ ಹೆಚ್ಚಾಗುತ್ತಿರುವ ಮಧ್ಯಯೇ ಮಂಗನ ಕಾಯಿಲೆಗೆ ಚಿಕ್ಕಮಗಳೂರಿನಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ಜರುಗಿದೆ.

ಚಿಕ್ಕಮಗಳೂರು ಜಿಲ್ಲೆಯ ಎನ್​.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ವಾಸಿ ಕಮಲಾ(65) ಮೃತ ದುರ್ದೈವಿ. ಮೃತ ಕಮಲಾ ಮೇಲ್ಪಾಲ್ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಕಮಲಾ ಅವರು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕಮಲಾ ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement - 

ಕಾಫಿ ನಾಡಿದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ಕಾಫಿ ತೋಟದ ಕಾರ್ಮಿಕರಲ್ಲೇ ಹೆಚ್ಚಾಗಿ ಕಾಣಿಸುತ್ತಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ 51 ಜನರಿಗೆ ಮಂಗನ ಕಾಯಿಲೆ ದೃಢವಾಗಿದೆ. ಕೊಪ್ಪ, ಎನ್​.ಆರ್.ಪುರ ತಾಲೂಕಿನಲ್ಲಿ ಮಂಗನ ಕಾಯಿಲೆ ಹೆಚ್ಚುತ್ತಿದೆ. ಹೀಗಾಗಿ, ಮಲೆನಾಡು ತಾಲೂಕುಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಮಂಗನ ಕಾಯಿಲೆಗೆ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್​ ತೆರೆದಿದ್ದು ಹೆಚ್ಚಿನ ಜಾಗ್ರತೆ ವಹಿಸಲಾಗಿದೆ.

 

- Advertisement - 

Share This Article
error: Content is protected !!
";