ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕೆ.ಆರ್.ಮಾರ್ಕೆಟ್ ಬಳಿಯ ಗೋಡೌನ್‌ಸ್ಟ್ರೀಟ್‌ನಲ್ಲಿ ಜನವರಿ 19ರಂದು ರಾತ್ರಿ 11:30ರ ಸುಮಾರಿಗೆ ಇಬ್ಬರು ವ್ಯಕ್ತಿಗಳು ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ ಎಂದು ಆರೋಪಿಸಿ 37 ವರ್ಷದ ಮಹಿಳೆಯೊಬ್ಬರು ಕೇಂದ್ರ ವಿಭಾಗದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬಸ್‌ಗಾಗಿ ಕಾಯುತ್ತಿದ್ದ ಈ ಮಹಿಳೆಯ ಮೇಲೆ ಇಬ್ಬರು ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಮೊಬೈಲ್, ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ ಎಂದು ದೂರಿನಲ್ಲಿ ಆಕೆ ತಿಳಿಸಿದ್ದಾರೆ.

- Advertisement - 

ಯಲಹಂಕಕ್ಕೆ ತೆರಳಲು ಸಂತ್ರಸ್ತ ಮಹಿಳೆ ಕೆ.ಆ‌ರ್. ಮಾರ್ಕೆಟ್‌ಬಳಿ ಬಸ್‌ಗಾಗಿ ಕಾಯುತ್ತಿದ್ದರು. ಈ ವೇಳೆ ಬಂದ ಇಬ್ಬರು ಅಪರಿಚಿತರು ಮಹಿಳೆಗೆ ದಾರಿ ತೋರಿಸುವುದಾಗಿ ಕರೆದೊಯ್ದಿದ್ದಾರೆ. ಬಳಿಕ ಗೋಡೌನ್ ಸ್ಟ್ರೀಟ್ ಬಳಿ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ನಂತರ ಬೆದರಿಸಿ ಮೊಬೈಲ್, ಹಣ, ಚಿನ್ನಾಭರಣ ದೋಚಿಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಸತ್ಯಾಸತ್ಯತೆಯ ಕುರಿತು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹಾಗೂ ಓರ್ವ ಶಂಕಿತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";