ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಘಾಟಿ ಬಳಿಯ ವಿಶ್ವೇಶ್ವರಯ್ಯ ಪಿಕ್ ಅಪ್ ಡ್ಯಾಂನಲ್ಲಿ ಮಹಿಳಾ ಶವ ಪತ್ತೆಯಾಗಿದೆ.
ಗಂಡ, ಅತ್ತೆ, ಮಾವ, ಮೈದುನ ಹಾಗೂ ಸಂಬಂಧಿಕರ ಕಿರುಕುಳದ ಆರೋಪಕ್ಕೆ ಸಂಬಂಧಿಸಿದಂತೆ ವಿಡಿಯೋ ರೆಕಾರ್ಡ್ ಮಾಡಿ ಸಂಬಂಧಿಕರಿಗೆ ಶೇರ್ ಮಾಡಿ ದೊಡ್ಡಬಳ್ಳಾಪುರ ತಾಲೂಕಿನ ಎಸ್ ಎಸ್ ಘಾಟಿ ಸುಬ್ರಹ್ಮಣ್ಯ ದೇವಾಲಯ ಸಮೀಪವಿರುವ ಸರ್.ಎಂ ವಿಶ್ವೇಶ್ವರಯ್ಯ ಪಿಕ್ ಡ್ಯಾಂಗೆ ಹಾರಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸಮೀಪದ ಸೋತೇನಹಳ್ಳಿ ನಿವಾಸಿ ಪುಷ್ಪ(28) ಎಂದು ಗುರುತಿಸಲಾಗಿದೆ.
ತಪಸೀಹಳ್ಳಿ ಗ್ರಾಮದ ವೇಣು ಜೊತೆ ಕಳೆದ ಒಂದು ವರ್ಷದ ಹಿಂದೆ ವಿವಾಹವಾಗಿದ್ದರು. ವರದಕ್ಷಿಣೆ ಹಾಗೂ ನಿವೇಶನಕ್ಕಾಗಿ ಕಿರಕುಳದಿಂದಾಗಿ ಪುಷ್ಪ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.
ಗಂಡನ ಮನೆಯ ಕಿರುಕುಳ ತಾಳಲಾರದೆ ಸಾಯುವ ಮುನ್ನ ವಿಡಿಯೋ ಮಾಡಿ ಪುಷ್ಪಾ(28)ಆತ್ಮಹತ್ಯೆ ಶರಣಾಗಿದ್ದಾರೆ. ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಖೆ ನಂತರ ಸತ್ಯಾಸತ್ಯತೆ ಹೊರಬೀಳಲಿದೆ.

