ರೈಲ್ವೆ ನಿಲ್ದಾಣದ ಸಮೀಪ ಸುಟ್ಟು ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯಶವಂತಪುರ ರೈಲ್ವೆ ನಿಲ್ದಾಣದ ಸಮೀಪ ಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾದ ಘಟನೆ ನಡೆದಿದೆ.
ಯಶವಂತಪುರ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್
1ರ ಬಳಿಯ ಕಾಂಪೌಂಡ್​ ಪಕ್ಕದಲ್ಲಿ ಸುಮಾರು 35 ವರ್ಷ ವಯಸ್ಸಿನ ಮಹಿಳೆಯ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ದುಷ್ಕರ್ಮಿಗಳು ಮಹಿಳೆಯ ಮುಖಕ್ಕೆ ಪ್ಲಾಸ್ಟಿಕ್ ಕವರ್ ಸುತ್ತಿ ಹತ್ಯೆ ಮಾಡಿದ ಬಳಿಕ ಬೆಂಕಿ ಇಟ್ಟಿರುವಂತೆ ಮೇಲ್ನೋಟಕ್ಕೆ ಕಂಡುಬಂದಿದೆ. ಬೆಳಗ್ಗೆ ಮೃತ ದೇಹವನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ರೈಲ್ವೆ 1ನೇ ಪ್ಲಾಟ್‌ ಫಾರ್ಮ್‌ನ ಕೊನೆಯಲ್ಲಿ ಮೃತದೇಹ ಪತ್ತೆಯಾಗಿದೆ. ಪ್ರಾಥಮಿಕ‌ತನಿಖೆಯಲ್ಲಿ ಬೇರೆಡೆಯಿಂದ ಮೃತದೇಹ ತಂದಿರುವ ಕುರುಹುಗಳಿಲ್ಲ. ಸ್ಥಳದಲ್ಲಿಯೇ ಹತ್ಯೆಗೈದು, ಮೃತದೇಹಕ್ಕೆ ಬೆಂಕಿಯಿಟ್ಟಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ರಾಜ್ಯ ರೈಲ್ವೆ ಎಸ್​ಪಿ ಡಾ. ಸೌಮ್ಯಲತಾ ಎಸ್.ಕೆ. ಪ್ರಕರಣದ ಮಾಹಿತಿ ತಿಳಿಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";