ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ: ಪ್ರತಿಜ್ಞಾವಿಧಿ ಸ್ವೀಕಾರ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಯನ್ನು ಆಚರಿಸಲಾಯಿತು.

ಜೀತ ಪದ್ಧತಿ (ನಿರ್ಮೂಲನೆ) ಕಾಯಿದೆ 1976 ಜಾರಿಗೆ ಬಂದು 50 ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಈ ವರ್ಷದ ಆಚರಣೆಯು ವಿಶೇಷ ಮಹತ್ವ ಪಡೆದುಕೊಂಡಿದೆ. ಕಾಯ್ದೆಯ ಆಶಯಗಳನ್ನು ಎತ್ತಿ ಹಿಡಿಯುವ ಮತ್ತು ಸಮಾಜದಲ್ಲಿ ಜೀತ ಪದ್ಧತಿಯಂತಹ ಅನಿಷ್ಟಗಳನ್ನು ತೊಲಗಿಸುವ ನಿಟ್ಟಿನಲ್ಲಿ ಎಲ್ಲರಲ್ಲಿಯೂ ಜಾಗೃತಿ ಮೂಡಿಸುವಂತೆ ಡಾ. ರೇಣುಪ್ರಸಾದ್ ಈ ಸಂದರ್ಭದಲ್ಲಿ ಹೇಳಿದರು.

- Advertisement - 

ಸಹಾಯಕ ಆಡಳಿತ ಅಧಿಕಾರಿ ಅನುಸೂಯಮ್ಮ ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಪ್ರತಿಜ್ಞೆ ಸಿಬ್ಬಂದಿಗೆ ಬೋಧಿಸಿದರು. ಈ ವೇಳೆ ಕಚೇರಿ ಅಧಿಕ್ಷಕ ಗವಿಸಿದ್ದೇಶ್, ಇಸ್ಮೈಲ್, ಅಣ್ಣಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯಕ್ ಮತ್ತು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜಾನಕಿ, ಪ್ರಥಮ ದರ್ಜೆ ಸಹಾಯಕರಾದ ತಿಪ್ಪೇಸ್ವಾಮಿ, ಬಾಬು, ರಾಜೇಶ್ವರಿ, ಲಕ್ಷ್ಮಿ, ಪುನೀತ್, ಜಿಲ್ಲಾ ಮೇಲ್ವಿಚಾರಕರಾದ ಸುರೇಶ್ ಬಾಬು, ಮಲ್ಲಿಕಾರ್ಜುನ್, ಗಂಗಾಧರ್, ಜಬ್ಬಾರ್ ಇದ್ದರು.

 

- Advertisement - 

Share This Article
error: Content is protected !!
";