ಚಂದ್ರವಳ್ಳಿ ನ್ಯೂಸ್, ತುಮಕೂರು:
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಚುನಾವಣೆ ವಿಷಯ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪ್ರತಿಷ್ಠೆ ಮಾರ್ಪಟ್ಟಿದೆ.
ಸಿದ್ದರಾಮಯ್ಯ ಬಣದ ಕೆ.ಎನ್. ರಾಜಣ್ಣ ಮತ್ತೊಮ್ಮೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಬೇಕೆಂದು ಪಟ್ಟು ಹಿಡಿದಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಬಣದ ನಾಯಕರು ತಾವು ಆಗುತ್ತೇವೆಂದು ಹಠಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಹೀಗಾಗಿ ಸಿಎಂ ಮತ್ತು ಡಿಸಿಎಂ ಬಣಗಳ ರಾಜಕೀಯ ತೀವ್ರ ಸ್ವರೂಪ ಪಡೆದುಕೊಂಡಿದೆ.
ಜನವರಿ 29 ರಂದು ನಡೆಯಬೇಕಿದ್ದ ಅಪೆಕ್ಸ್ ಬ್ಯಾಂಗ್ ಅಧ್ಯಕ್ಷ ಚುನಾವಣೆಯನ್ನು ದಿಢೀರ್ ಮುಂದೂಡಲಾಗಿದೆ. ಜೊತೆಗೆ ಅಪೆಕ್ಸ್ ಬ್ಯಾಂಕ್ ಚುನಾವಣೆಯಲ್ಲಿ ಹೈಕಮಾಂಡ್ ಮಧ್ಯೆ ಪ್ರವೇಶಿಸಿದಂತಿದೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಎಂಟ್ರಿಯಾಗಿದ್ದು ಇದಕ್ಕೆ ವಿಧಾನಪರಿಷತ್ ಸದಸ್ಯ, ರಾಜಣ್ಣನವರ ಪುತ್ರ ರಾಜೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

