ಶಿಥಿಲಾವಸ್ಥೆಯ ಸರ್ಕಾರಿ ಉರ್ದು ಶಾಲೆ ಪರಿಶೀಲಿಸಿದ ಎಸಿ ಜಿಲಾನಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಹೊರಪೇಟೆಯಲ್ಲಿರುವ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗೆ ಉಪ ವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಮಂಗಳವಾರ ಭೇಟಿ ನೀಡಿ ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳನ್ನು ವೀಕ್ಷಿಸಿದರು.

ದುಸ್ಥಿತಿಯಲ್ಲಿರುವ ಹಳೆಯ ಕೊಠಡಿಗಳನ್ನು ಕೆಡವಿ ನೂತನ ಕೊಠಡಿಗಳನ್ನು ನಿರ್ಮಿಸುವಂತೆ ನಿರ್ಮಿತಿ ಕೇಂದ್ರ ಹಾಗೂ ಲ್ಯಾಂಡ್ ಆರ್ಮಿ ಇಂಜಿನಿಯರ್‌ಗಳಿಗೆ ಸೂಚಿಸಿದ ಉಪ ವಿಭಾಗಾಧಿಕಾರಿ ಮಕ್ಕಳಿಗೆ ದಿನನಿತ್ಯವೂ ಮೊಟ್ಟೆ, ಬಾಳೆ ಹಣ್ಣು ವಿತರಿಸಬೇಕು. ಮಕ್ಕಳ ಹಾಜರಾತಿ ಪುಸ್ತಕವನ್ನು ವೀಕ್ಷಿಸಿ ನಿರಂತರವಾಗಿ ಶಾಲೆಗೆ ಗೈರಾಗುವ ಮಕ್ಕಳ ಮನವೊಲಿಸಿ ಶಾಲೆಗೆ ಕರೆತರುವ ಕೆಲಸವಾಗಬೇಕು. ಇದಕ್ಕೆ ಪೋಷಕರುಗಳ ಜವಾಬ್ದಾರಿಯೂ ಇದೆ ಎಂದು ಹೇಳಿದರು.

- Advertisement - 

ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರ ಪೂರೈಸುತ್ತಿರುವ ಸೌಲಭ್ಯಗಳು ಸಮರ್ಪಕವಾಗಿ ತಲುಪಬೇಕು. ಈ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಮುಖ್ಯ. ಮಕ್ಕಳ ಮನಸ್ಸಿಗೆ ನಾಟುವ ರೀತಿಯಲ್ಲಿ ಪಾಠಗಳನ್ನು ಬೋಧಿಸುವಂತೆ ಉಪ ವಿಭಾಗಾಧಿಕಾರಿ ಸೂಚಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ಪ್ರಧಾನ ಮಂತ್ರಿಗಳ ಹೊಸ ಹದಿನೈದು ಅಂಶಗಳ ಕಾರ್ಯಕ್ರಮಗಳ ಅನುಷ್ಟಾನ ಸಮಿತಿ ಸದಸ್ಯ ಹೆಚ್.ಆರ್.ಮಹಮದ್, ನಗರಸಭೆ ಮಾಜಿ ಉಪಾಧ್ಯಕ್ಷ ಸೈಯದ್ ಅಲ್ಲಾಭಕ್ಷಿ, ಉರ್ದು ಇ.ಸಿ.ಓ. ಸಮೀರ, ನಗರಸಭೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿ ರೇಖಾ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

- Advertisement - 

 

 

Share This Article
error: Content is protected !!
";