ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೊಪ್ಪಳ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿ ಅಮೀನಸಾಬ ಅವರು ಕೊಪ್ಪಳ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿಗಳಾಗಿ ಸೆಪ್ಟೆಂಬರ್ 02 ರಂದು ಹೆಚ್ಚುವರಿ ಕಾರ್ಯಭಾರವಾಗಿ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಮಾನ್ಯ ಕುಲಪತಿ ಪ್ರೊ. ಬಿ.ಕೆ. ರವಿ ಹಾಗೂ ಕುಲಸಚಿವರು (ಪ್ರಭಾರ) (ಆಡಳಿತ) ಪ್ರೊ. ಕೆ.ವಿ. ಪ್ರಸಾದ ಇವರುಗಳು ಉಪಸ್ಥಿತರಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.