ಚಂದ್ರವಳ್ಳಿ ನ್ಯೂಸ್, ಉಡುಪಿ:
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಮಹಿಳಾ ಘಟಕ ಇದರ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಮಣಿಪಾಲ ಸರಳೀಬೆಟ್ಟು ರತ್ನ ಸಂಜೀವ ಕಲಾಭವನದಲ್ಲಿ ಫೆ.28 ರಂದುನಡೆಯಿತು.
ಈ ಸಂದರ್ಭದಲ್ಲಿ ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ ಇದರ ಉಪಾಧ್ಯಕ್ಷರಾದ ಮಹೇಶ್ ಠಾಕೂರ್ ರವರು ಭಾಗವಹಿಸಿದರು. ಜಾನಪದ ಕಲೆಯ ಉತ್ತೇಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವಿಶೇಷ ಒತ್ತು ನೀಡುತ್ತಿರುವ ಅವರನ್ನು ಘಟಕದ ವತಿಯಿಂದ “ಜಾನಪದ ಪ್ರಚಂಡ” ಜಿಲ್ಲಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮವನ್ನು ಕನ್ನಡ ಜಾನಪದ ಪರಿಷತ್ ಬೆಂಗಳೂರು ಇದರ ರಾಜ್ಯಾಧ್ಯಕ್ಷ ಡಾ.ಜಾನಪದ ಎಸ್ ಬಾಲಾಜಿ ಯವರು ಉದ್ಘಾಟಿಸಿ ಶುಭ ಹಾರೈಸಿದರು. ಡಾ.ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಅಧ್ಯಕ್ಷತೆ ವಹಿಸಿದ್ದರು.
ಕನ್ನಡ ಜಾನಪದ ಪರಿಷತ್ ಬೆಂಗಳೂರು ಇದರ ವಿಭಾಗಿಯ ಸಂಚಾಲಕರಾದ ಡಾ. ಭಾರತಿ ಮರವಂತೆ, ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾದ ಉಷಾ ಹೆಬ್ಬಾರ್, ಕನ್ನಡ ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲಾ ಸಹಾಯಕ ನಿರ್ದೇಶಕರಾದ ಪೂರ್ಣಿಮಾ, ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ, ನಗರಸಭಾ ಮಾಜಿ ಸದಸ್ಯ ನರಸಿಂಹ ನಾಯಕ್, ರಾಘವೇಂದ್ರ ಪ್ರಭು ಕವಾ೯ಲು ಮುಂತಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪರಿಷತ್ ಸದಸ್ಯರಿಂದ ಸಂಗೀತ ಕಾರ್ಯಕ್ರಮ ನಡೆಯಿತು.

