ಡಿ.10ರಂದು ಮಕ್ಕಳಿಂದ ಅಹವಾಲು ಸ್ವೀಕಾರ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಪೊಲೀಸ್ ಇಲಾಖೆ

ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಇದೇ ಡಿ.10ರಂದು ಬೆಳಿಗ್ಗೆ 10.30ಕ್ಕೆ ನಗರದ ಸೆಂಟ್ಜೋಸೆಫ್ ಶಾಲಾ ಸಭಾಂಗಣದಲ್ಲಿ ಮಕ್ಕಳಿಂದ ಅಹವಾಲು ಸ್ವೀಕಾರ ಹಾಗೂ ಸಂವಾದ ಕಾರ್ಯಕ್ರಮಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಚಿತ್ರದುರ್ಗ ಪೊಲೀಸ್ ಉಪಾಧೀಕ್ಷಕ ಪಿ.ಕೆ.ದಿನಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪಪನಿರ್ದೇಶಕಿ ಭಾರತಿ ಆರ್ ಬಣಕಾರ್, ತಹಶೀಲ್ದಾರ್ ಡಾ.ನಾಗವೇಣಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವೈ.ರವಿಕುಮಾರ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಪಿ.ಶೀಲಾ ಭಾಗವಹಿಸುವರು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ ತಿಳಿಸಿದ್ದಾರೆ.

 

 

 

- Advertisement -  - Advertisement - 
Share This Article
error: Content is protected !!
";