ಆಕಸ್ಮಿಕ ಅಗ್ನಿ ಅವಘಡ, ಕಾರ್ಮಿಕರ ಶೆಡ್ ಗಳು ಸಂಪೂರ್ಣ ಭಸ್ಮ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಕಸ್ಮಿಕ ಅಗ್ನಿ ಅವಘಡದಲ್ಲಿ
20ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ವಾಸವಿದ್ದ ಶೆಡ್​ಗಳು ಸುಟ್ಟು ಕರಕಲಾದ ಘಟನೆ ಬೆಂಗಳೂರಿನ ಗೋವಿಂದಪುರ ಠಾಣಾ ವ್ಯಾಪ್ತಿಯ ವೀರಣ್ಣಪಾಳ್ಯ ಮುಖ್ಯರಸ್ತೆಯಲ್ಲಿ ತಡರಾತ್ರಿ ಸಂಭವಿಸಿದೆ.

ಆಟಿಕೆ ತಯಾರಿಕಾ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗಾಗಿ ನಿರ್ಮಿಸಲಾಗಿದ್ದ 20 ಶೆಡ್​ಗಳು ಸಂಪೂರ್ಣವಾಗಿ ಕರಕಲಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು.

ಮೊದಲಿಗೆ ಒಂದು ಶೆಡ್​ನಲ್ಲಿ ಕಾಣಿಸಿಕೊಂಡ ಬೆಂಕಿ ನೋಡ ನೋಡುತ್ತಿದ್ದಂತೆ ಇತರೆ ಶೆಡ್‌ಗಳಿಗೂ ಹಬ್ಬಿದೆ. ಟೆಂಟ್ ಒಳಗಿದ್ದವರು ಹೊರಗೆ ಓಡಿ ಬಂದಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

 ಶೆಡ್‌ನಲ್ಲಿ ಬಹುತೇಕ ರಾಯಚೂರು ಮೂಲದ ಕೂಲಿ ಕಾರ್ಮಿಕರು ವಾಸವಿದ್ದು, ಅವಘಡದಿಂದ ಕಂಗಾಲಾಗಿದ್ದಾರೆ‌. ರಾತ್ರಿಯಿಡೀ ಅವರು ಸ್ಥಳೀಯ ದೇಗುಲದ ಅಂಗಳದಲ್ಲಿ ವಿಶ್ರಾಂತಿ ಪಡೆದಿದ್ದಾರೆ. ಇತ್ತ ಜಾಗದ ಮಾಲೀಕ‌ಸಹ ಶೆಡ್​ಗಳಲ್ಲಿದ್ದವರಿಗೆ ಮನೆ ಖಾಲಿ ಮಾಡಲು ಸೂಚಿಸಿದ್ದು, ಕಾರ್ಮಿಕರ ಆತಂಕಕ್ಕೆ ಕಾರಣವಾಗಿದೆ.

 

Share This Article
error: Content is protected !!
";