ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹೋಟೆಲ್ ವ್ಯವಸ್ಥಾಪಕರಿಂದ ಲಂಚ ಸ್ವೀಕರಿಸುತ್ತಿದ್ದ ಮಲ್ಲೇಶ್ವರಂ ಉಪವಿಭಾಗದ ಎಸಿಪಿ ಕೃಷ್ಣಮೂರ್ತಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ರಾಜಾಜಿನಗರದ ಸಾಗರ್ ಹೋಟೆಲ್ ವ್ಯವಸ್ಥಾಪಕ ಸಂಜಯ್ ಕುಮಾರ್ ಅವರು ಅವಧಿ ಮೀರಿ ಕಾರ್ಯನಿರ್ವಹಣೆಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದು ಆಗ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ನೀಡಲು ಮನಸ್ಸಿಲ್ಲದಿದ್ದ ಕಾರಣ ಅವರು ಲೋಕಾಯುಕ್ತರಿಗೆ ದೂರಿ ನೀಡಿದ್ದರು. ದೂರು ಆಧರಿಸಿ ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡು ಎಸಿಪಿ ಬಂಧಿಸಿದ್ದಾರೆ.
ಅವಧಿ ಮೀರಿದ ಬಳಿಕವೂ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಆರೋಪದಡಿ ರಾಜಾಜಿನಗರದ ಸಾಗರ್ ಹೋಟೆಲ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಈ ಸಂಬಂಧ ವಿಚಾರಣೆ ನಡೆಸಿದ್ದ ಎಸಿಪಿ ಕೃಷ್ಣಮೂರ್ತಿ ಅವರು ಅನುಮತಿ ನೀಡಲು 50 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿರುವುದಾಗಿ ಹೋಟೆಲ್ ವ್ಯವಸ್ಥಾಪಕ ಸಂಜಯ್ ಕುಮಾರ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಅದರನ್ವಯ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಕಚೇರಿಯಲ್ಲಿ 30 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗಲೇ ಎಸಿಪಿ ಕೃಷ್ಣಮೂರ್ತಿ ಅವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿಸಿದ್ದಾರೆ.

