ಸಕ್ರಿಯ ಕಾರ್ಯಕರ್ತರು ಕಡ್ಡಾಯವಾಗಿ 50 ಸದಸ್ಯರನ್ನಾಗಿ ಮಾಡಬೇಕು- ತಿಪ್ಪಾರೆಡ್ಡಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇಡೀ ದೇಶದಲ್ಲಿ 11 ಕೋಟಿ, ಕರ್ನಾಟಕ ರಾಜ್ಯದಲ್ಲಿ 60 ಲಕ್ಷ ಸದಸ್ಯರನ್ನು ಹೊಂದಿರುವ ಪಕ್ಷವಾಗಿದೆ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ತಿಳಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ನಡೆದ ಸಕ್ರಿಯ ಸದಸ್ಯರು ಅರ್ಜಿ ತುಂಬುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಸದಸ್ಯತ್ವ ಮಾಡಲು ಇನ್ನು ಮೂರು ದಿನ  ಸಮಯವಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಕ್ಕೆ ಸದಸ್ಯರನ್ನಾಗಿ ಮಾಡುವಂತೆ ಅವರು ಸೂಚನೆ ನೀಡಿದರು.

ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಬೂತ್‌ನಲ್ಲಿಯೂ ಮೂರು ಜನ ಸಕ್ರಿಯ ಕಾರ್ಯಕರ್ತರು ಕಡ್ಡಾಯವಾಗಿ ಇರಬೇಕು. ಆ ಮೂರು ಜನ ಕಾರ್ಯಕರ್ತರು ತನ್ನ ಬೂತ್ ನಲ್ಲಿ ೫೦ ಜನರನ್ನು ಪಕ್ಷದ ಸದಸ್ಯರನ್ನಾಗಿ ಮಾಡುತ್ತಾರೋ ಅಂತಹರು ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತರಾಗುತ್ತಾರೆ ಇವರು ಮುಂದಿನ ದಿನದಲ್ಲಿ ಪಕ್ಷದ ವಿವಿಧ ರೀತಿಯ ಹುದ್ದೆಗಳನ್ನು ಅಲಂಕರಿಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ದೇಶದಲ್ಲಿ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ ನಮ್ಮದಾಗಬೇಕಿದೆ ಇದಕ್ಕಾಗಿ ನಮ್ಮ  ಪಕ್ಷದ ಕಾರ್ಯಕರ್ತರರು ಈ ದಿನದಲ್ಲಿ ಹೆಚ್ಚಿನ ಶ್ರಮವನ್ನು ಹಾಕುವುದರ ಮೂಲಕ ಸದಸ್ಯರನ್ನು ಮಾಡಬೇಕಿದೆ. ಇದು ಮುಂದಿನ ದಿನದಲ್ಲಿ ಬರುವ ಜಿಲ್ಲಾ ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಅನುಕೂಲವಾಗಲಿದೆ. ಈ ಚುನಾವಣೆ ಕಾರ್ಯಕರ್ತರ ಚುನಾವಣೆಯಾಗಿದ್ದು ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕಿದೆ ಎಂದು ತಿಪ್ಪಾರೆಡ್ಡಿ ಕಿವಿ ಮಾತು ಹೇಳಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ನಗರಾಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಅಧ್ಯಕ್ಷ ಕಲ್ಲೇಶಯ್ಯವಕ್ತಾರ ನಾಗರಾಜ್ ಬೇದ್ರೆ, ಯುವ ಮೋರ್ಚಾದ ಅಧ್ಯಕ್ಷ ರಾಮು, ಬಸಮ್ಮ, ಶಾಂತಮ್ಮ, ಕಿರಣ, ನಾಗರಾಜ್ ಸೇರಿದಂತೆ ಇತರರು ಭಾಗವಹಿಸಿದ್ದರು.

 

- Advertisement -  - Advertisement -  - Advertisement - 
Share This Article
error: Content is protected !!
";