ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡ ಚಿತ್ರರಂಗದ ನಾಯಕ ನಟ ಅನಂತ್ ನಾಗ್ ಅವರಿಗೆ ಕೇಂದ್ರ ಸರ್ಕಾರದಿಂದ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ಕನ್ನಡ ಚಿತ್ರರಂಗದ ಜನಪ್ರಿಯ ನಾಯಕನಟರಾಗಿರುವ ಅನಂತ್ ನಾಗ್ ಅವರು ಕನ್ನಡದ ಸದಭಿರುಚಿಯ ಕೌಟುಂಬಿಕ ಹಿನ್ನೆಲೆಯಲ್ಲಿರುವ ಚಿತ್ರಗಳಲ್ಲಿ ನಟಿಸಿ ಜನಪ್ರಿಯತೆ ಗಳಿಸಿದ್ದಾರೆ.
ಸರಳ ಸಜ್ಜನಿಕೆಯ ವ್ಯಕ್ತಿತ್ವ ಮೈಗೂಡಿಸಿಕೊಂಡಿರುವ ಇವರು ಜನತಾಪಕ್ಷದ ಆಡಳಿತದಲ್ಲಿ ಜೆ ಎಚ್ ಪಟೇಲ್ ಅವರ ಮುಖ್ಯಮಂತ್ರಿ ಸಂದರ್ಭದಲ್ಲಿ ಜೆ.ಹೆಚ್ ಪಟೇಲ್ ಅವರ ಸಂಪುಟದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಇವರ ಅವಧಿಯಲ್ಲಿಯೇ ಪ್ರಥಮವಾಗಿ ಬೆಂಗಳೂರು ಅಭಿವೃದ್ಧಿಗೆ ಸಚಿವ ಸ್ಥಾನ ನೀಡಲಾಗಿತ್ತು.
ಈಗಿನ ಸರ್ಕಾರದಲ್ಲಿ ಡಿ ಕೆ ಶಿವಕುಮಾರ್ ಅವರು ಬೆಂಗಳೂರು ಅಭಿವೃದ್ಧಿ ಸಚಿವರಾಗಿದ್ದಾರೆ ಎಂದು ರಘು ಗೌಡ ತಿಳಿಸಿದ್ದಾರೆ.