ಚಂದ್ರವಳ್ಳಿ ನ್ಯೂಸ್, ಬೆಂಗಳೂರು
ಕನ್ನಡ ಚಿತ್ರ ರಂಗದಲ್ಲಿ ಲೈಂಗಿಕ ದೌರ್ಜನ್ಯಗಳ ತನಿಖೆ ಮಾಡಲು ಒಂದು ಸಮಿತಿ ರಚನೆ ಮಾಡಿ ಸೂಕ್ತ ತನಿಖೆ ಮಾಡುವಂತೆ ಚಿತ್ರ ನಟಿ ಸಂಜನಾ ಮನವಿ ಮಾಡಿದ್ದಾರೆ.
ನಟಿ ಸಂಜನಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ ರಾಜ್ಯದಲ್ಲೂ ಕೇರಳ ಮಾದರಿಯಲ್ಲಿ ಲೈಂಗಿಕ ದೌರ್ಜನ್ಯಗಳ ತನಿಖೆಗೆ ಸಮಿತಿ ರಚಿಸುವಂತೆ ಒತ್ತಾಯಿಸಿ ಮನವಿ ಮಾಡಿದರು.