ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಬಿ. ಸರೋಜಾದೇವಿಯವರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಮನಸ್ಸು ಅತ್ಯಂತ ದುಃಖಿತವಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
6 ದಶಕಗಳ ಕಾಲ ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಭಾಷೆ ಸೇರಿದಂತೆ 10 ಕ್ಕೂ ಹೆಚ್ಚು ಭಾಷೆಗಳಲ್ಲಿ ನಟಿಸಿ, ಜನಮನ ಸೂರೆಗೊಂಡಿದ್ದ, ಮನೆಮಾತಾಗಿದ್ದ ನಟಿ ಇವರು. ಇವರ ಸಾಧನೆಗೆ ಪ್ರದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳೂ ಒಲಿದುಬಂದಿವೆ. ಇವರ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವುಂಟಾಗಿದೆ.
ಶ್ರೀಯುತರ ಆತ್ಮಕ್ಕೆ ಭಗವಂತ ಸದ್ಗತಿ ನೀಡಲಿ, ಕುಟುಂಬಸ್ಥರು ಹಾಗೂ ಅಭಿಮಾನಿಗಳಲ್ಲಿ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸೋಮಣ್ಣ ಪ್ರಾರ್ಥಿಸಿದ್ದಾರೆ.