ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಿ ಮತದಾನದ ಹಕ್ಕು ಪಡೆಯಿರಿ

News Desk

ಚಂದ್ರವಳ್ಳಿ ನ್ಯೂಸ್, ಶಿರಾ:
ಮತದಾನ ನಮ್ಮ ಹಕ್ಕು, ಮತದಾರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿ.
ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರ್ಪಡೆ ಮಾಡಿಕೊಳ್ಳಲು ಅಗತ್ಯ ದಾಖಲೆಗಳನ್ನು ಒದಗಿಸಿ ನೋಂದಣಿ ಮಾಡಿಕೊಳ್ಳುವಂತೆ ನಾಗೇಶ್ ಗೌಡ ಮನವಿ ಮಾಡಿದ್ದಾರೆ.
2022ರ ನವೆಂಬರ್  1ಕ್ಕೂ ಮುನ್ನ ಯಾವುದೇ ಪದವಿ ಪಡೆದ ಪದವೀಧರರು ಅರ್ಜಿ ಸಲ್ಲಿಸಲು ಅರ್ಹರು.

ನಿಗದಿತ ನಮೂನೆಯ ಜೊತೆಗೆ ಗೆಜೆಟೆಡ್ ಅಧಿಕಾರಿಯಿಂದ ದೃಢೀಕರಿಸಿದ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಆಧಾರ್ ಕಾರ್ಡ್, ವೋಟರ್ ಐಡಿ, ಎಸ್ ಎಸ್ ಎಲ್ ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರದ ನಕಲು ಜೊತೆಗೆ ಒಂದು ಪಾಸ್ಪೋರ್ಟ್ ಸೈಜ್ ಫೋಟೋವನ್ನು ಅರ್ಜಿ ಜೊತೆ ಲಗತ್ತಿಸಬೇಕು.

- Advertisement - 

ಮತದಾರರು ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು ಅರ್ಜಿ ಸಲ್ಲಿಸಲು ಕೊನೆ ದಿನಾಂಕ- 6 ನವೆಂಬರ್2025.

 ಇನ್ನು ಹೆಚ್ಚಿನ ಮಾಹಿತಿಗೆ ಆಯಾಯ ತಾಲೂಕು ಕಚೇರಿ ಅಥವಾ ತಾಲೂಕು ಚುನಾವಣಾ ಶಾಖೆ ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿ ಬೇಕಿದ್ದರೆ ಹೆಚ್.ಕೆ. ನಾಗೇಶ್ ಗೌಡ 9538137442 ಶಿಕ್ಷಣ ಇಲಾಖೆ ಶಿರಾ ಇವರನ್ನು ಸಂಪರ್ಕಿಸಬಹುದಾಗಿದೆ.

- Advertisement - 

Share This Article
error: Content is protected !!
";