ಚಂದ್ರವಳ್ಳಿ ನ್ಯೂಸ್, ತುಮಕೂರು:
ಅನ್ನಭಾಗ್ಯ ಯೋಜನೆಯಡಿ ಫೆಬ್ರವರಿ ಮಾಹೆಯಿಂದ ಜಾರಿಗೆ ಬರುವಂತೆ ನೇರ ನಗದು ವರ್ಗಾವಣೆ ಬದಲಾಗಿ ಅರ್ಹ ಫಲಾನುಭವಿಗಳಿಗೆ ೫ ಕೆ.ಜಿ. ಹೆಚ್ಚುವರಿ ಅಕ್ಕಿಯನ್ನು ವಿತರಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಸರ್ಕಾರದ ಆದೇಶದನ್ವಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ಆದ್ಯತಾ ಪಡಿತರ ಚೀಟಿ ಫಲಾನುಭವಿಗಳಿಗೆ ಫೆಬ್ರವರಿ ಮಾಹೆಯಿಂದ ಅನ್ವಯವಾಗುವಂತೆ ೫ ಕೆ.ಜಿ. ಹೆಚ್ಚುವರಿ ಅಕ್ಕಿಯನ್ನು ಬಿಡುಗಡೆ ಮಾಡಲಾಗುವುದು
ಅಂತ್ಯೋದಯ(ಎಎವೈ) ಪಡಿತರ ಚೀಟಿಗೆ ೩೫ ಕೆ.ಜಿ. ಅಕ್ಕಿ, ೪ ಮತ್ತು ೪ಕ್ಕಿಂತ ಹೆಚ್ಚಿನ ಸದಸ್ಯರುಗಳ ಪಡಿತರ ಚೀಟಿಗಳಲ್ಲಿನ ಪ್ರತಿ ಫಲಾನುಭವಿಗೆ ೫ ಕೆ.ಜಿ. ಹೆಚ್ಚುವರಿ ಅಕ್ಕಿ ಹಂಚಿಕೆ ಮಾಡಲಾಗುವುದು. ಆದ್ಯತಾ ಪಡಿತರ ಚೀಟಿ (ಬಿಪಿಎಲ್)ಯ ಪ್ರತಿ ಸದಸ್ಯರಿಗೆ ೫ ಕೆ.ಜಿ. ಹಾಗೂ ೫ ಕೆ.ಜಿ. ಹೆಚ್ಚುವರಿ ಅಕ್ಕಿಯನ್ನು ಹಂಚಿಕೆ ಮಾಡಲಾಗುವುದು.
ಈ ಪಡಿತರ ಧಾನ್ಯ ಪ್ರಮಾಣವನ್ನು ಫೆಬ್ರವರಿ ಹಾಗೂ ಮಾರ್ಚ್ ಮಾಹೆಗಾಗಿ ಪ್ರತ್ಯೇಕವಾಗಿ ವಿತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.