ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಹಂದಿಗಳ ಜೊತೆ ಜಗಳ ಮಾಡಿದರೆ ನಾವು ಕೊಳಕಾಗುತ್ತೇವೆ ಎಂದು ಹೇಳುವ ಮೂಲಕ ಎಸ್‌ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ಅವರು ತಮ್ಮ ವಿರುದ್ಧ ಭ್ರಷ್ಟಚಾರದ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುಮಾರಸ್ವಾಮಿ, ಎಡಿಜಿಪಿ ಚಂದ್ರಶೇಖರ್ ಮಾನ್ಯತಾ ಟೆಕ್ ಪಾರ್ಕ್ ಬಳಿ 38 ಫ್ಲೋರ್ ಮನೆ ಕಟ್ಟುತ್ತಿದ್ದಾರೆ. ಈ ಹಿಂದೆ ಚಂದ್ರಶೇಖರ್ ಮೇಲೆ ಎಫ್‌ಐಆರ್ ಆಗಿದೆ. ತನಿಖೆ ಮಾಡಬೇಕು ಈ ಸಂಬಂಧ ಕೇಂದ್ರದ ಗೃಹ ಕಾರ್ಯದರ್ಶಿಗೂ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದರು.
ಇದಕ್ಕೆ ಪತ್ರದ ಮೂಲಕ ತಮ್ಮ ಸಿಬ್ಬಂದಿಗಳಿಗೆ ಅಭಯ ನೀಡಿರುವ ಚಂದ್ರಶೇಖರ್, ಇಂದು ಕುಮಾರಸ್ವಾಮಿ ನನ್ನ ಮೇಲೆ ಸಾಕಷ್ಟು ಆರೋಪಗಳನ್ನು ಮಾಡಿದ್ದಾರೆ. ಆತ ಪ್ರಕರಣವೊಂದರ ಆರೋಪಿ ಅಷ್ಟೆ ಎಂದು ಖಾರವಾಗಿ ಬರೆದಿದ್ದಾರೆ. ಆರೋಪಿ ಹೆಚ್ ಡಿ ಕುಮಾರಸ್ವಾಮಿ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು.
ನನ್ನ ಮೇಲೆ ಕುಮಾರಸ್ವಾಮಿ ಸುಳ್ಳು ಆರೋಪ ಮಾಡುವ ಮೂಲಕ ಬೆದರಿಕೆ ಹಾಕಿದ್ದಾರೆ. ನಮ್ಮನ್ನು ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವನು ಎಷ್ಟೇ ಎತ್ತರದ ಸ್ಥಾನದಲ್ಲಿದ್ದರೂ ಅವನ್ನು ಆರೋಪಿಯೇ. ನಮ್ಮ ಕರ್ತವ್ಯವನ್ನು ನಾವು ನಿರ್ವಹಿಸೋಣಾ. ಅದನ್ನು ಯಾರಿಂದಲೂ ತಡಿಯಲು ಸಾಧ್ಯವಿಲ್ಲ. ಎಲ್ಲಾ ಬಾಹ್ಯ ಪ್ರಭಾವದಿಂದ ನಿಮ್ಮನ್ನು ರಕ್ಷಿಸುತ್ತೇನೆ ಎಂದು ಎಸ್ ಐಟಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅಭಯ ನೀಡಿದ್ದಾರೆ.
*ರಾಜಭವನ ಸಿಬ್ಬಂದಿ ತನಿಖೆ* ಅನುಮತಿ ಕೋರಿದ್ದ ಐಜಿಪಿ ವಿರುದ್ಧ ಎಚ್. ಡಿ. ಕುಮಾರಸ್ವಾಮಿ ವಾಗ್ದಾಳಿ-ಜಾರ್ಜ್ ಬರ್ನಾಡ್ ಶಾ ಅವರ ಪ್ರಸಿದ್ಧ ಇಂಗ್ಲಿಷ್ ಸಾಲನ್ನು ಬಳಸಿರುವ ಚಂದ್ರಶೇಖರ್, ಹಂದಿಗಳ ಜೊತೆ ಜಗಳಕ್ಕೆ ಇಳಿದರೆ ನಾವು ಕೊಳಕಾಗುತ್ತೇವೆ. ಯಾಕೆಂದರೆ ಹಂದಿಗಳು ಕೊಳಕನ್ನೇ ಇಷ್ಟಪಡುತ್ತವೆ. ಹೀಗಾಗಿ ನಾವು ಹಂದಿಗಳ ಜೊತೆ ಜಗಳ ಮಾಡಬಾರದು ಎಂದು ಹೇಳಿರುವ ಚಂದ್ರಶೇಖರ್ ಕೊನೆಯಲ್ಲಿ ಸತ್ಯಮೇವ ಜಯತೆ ಎಂದು ಪತ್ರದಲ್ಲಿ ಬರೆದಿದ್ದಾರೆ.