ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲೂಕಿನ ಸಿರಿಗೆರೆ ತರಳಬಾಳು ಮಠದ ಶಾಂತಿವನಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ
ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಹಾಗೂ ಡಾ. ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರು ಶುಕ್ರವಾರ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾ ಸ್ವಾಮೀಜಿಯವರು ಶಾಂತಿವನದಲ್ಲಿ ನಿರ್ಮಾಣ ಮಾಡಿರುವ ಜಲಾಶಯದಿಂದ ಅಂತರ್ಜಲ ವೃದ್ಧಿಯಾಗಿ ಸುತ್ತಮುತ್ತಲಿನ ರೈತರಿಗೆ ಅನುಕೂಲವಾಗಿರುವ ಬಗ್ಗೆ ಮತ್ತು ಶಾಂತಿವನದಲ್ಲಿ ಬೆಳೆಸಲಾಗಿರುವ ಹಲವು ಸಸ್ಯಗಳು ಗಿಡಮೂಲಿಕೆಗಳ ಕುರಿತು ಮಾಹಿತಿ ನೀಡಿದರು.

