ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿರುವುದನ್ನು ಪ್ರಶ್ನಿಸಿ ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಸಂತ್ರಸ್ತೆ, ಎಸ್ ಸ ಕುಮಾರ್ ಮತ್ತು ಬಿ.ಎಂ ನರೇಶ್ ಅವರು ತಮ್ಮ ವಿರುದ್ಧ ರಮೇಶ್ ಜಾರಕಿಹೊಳಿ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿರುವ ಅರ್ಜಿಗಳ ವಿಚಾರಣೆಯನ್ನೂ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಸೆಪ್ಟೆಂಬರ್ 16ಕ್ಕೆ ಮುಂದೂಡಿಕೆ ಮಾಡಿದೆ.