6 ರಿಂದ 10ನೇ ತರಗತಿಗೆ ಸಿಬಿಎಸ್‍ಇ ಪಠ್ಯಕ್ರಮ ಅಳವಡಿಕೆ

News Desk

ಚಂದ್ರವಳ್ಳಿ ನ್ಯೂಸ್, ಬೆಳಗಾವಿ / ಬೆಂಗಳೂರು:
ಪ್ರಸ್ತುತ ರಾಜ್ಯ ಪಠ್ಯಕ್ರಮದ 6 ರಿಂದ 10ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್ (CBSE) ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಹೇಳಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯರಾದ ಎಂ.ಎಲ್. ಅನಿಲಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆರ್ಟಿಇ ಕಾಯ್ದೆಯ ಅನುಷ್ಠಾನದಿಂದ 1 ರಿಂದ 8ನೇ ತರಗತಿಯವರೆಗೆ ಪ್ರವೇಶ ಶುಲ್ಕವನ್ನು ಸರ್ಕಾರವೇ ನೀಡುತ್ತಿದ್ದು, 8ನೇ ತರಗತಿಯಿಂದ ದ್ವಿತೀಯ ಪಿ.ಯು.ಸಿ ವರೆಗೂ ಯೋಜನೆಯನ್ನು ವಿಸ್ತರಿಸುವುದರಿಂದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿರುವ ಬಡ ಮಕ್ಕಳಿಗೆ ಅನುಕೂಲವಾಗಲಿದ್ದು,

ಸರ್ಕಾರವು ಯೋಜನೆಯನ್ನು ವಿಸ್ತರಿಸುವ ಬಗ್ಗೆ ಚಿಂತಿಸಿದೆಯೇ; ಇಲ್ಲದಿದ್ದಲ್ಲಿ ಯಾವ ಕಾಲಮಿತಿಯೊಳಗೆ ಯೋಜನೆಯನ್ನು ವಿಸ್ತರಿಸಲಾಗುವುದು ಎನ್ನುವ ಅನಿಲ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಯೋಜನೆಯನ್ನು ವಿಸ್ತರಿಸುವ ಪ್ರಸ್ತಾವನೆಯು ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";