ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಲ್ಬುರ್ಗಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ, ಚಾಮರಾಜ ಪೇಟೆಯಲ್ಲಿ ಹಸುಗಳ ಕೆಚ್ಚಲನ್ನು ಅಮಾನುಷವಾಗಿ ಕತ್ತರಿಸಲಾಗಿದೆ.
ಕಾಂಗ್ರೆಸ್‌ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಅಪರಾಧ, ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹರಿಹಾಯ್ದಿದ್ದಾರೆ.
ಓಲೈಕೆ ನೀತಿಯಲ್ಲೇ ಮುಳುಗಿರುವ ಸರ್ಕಾರದಿಂದ ದೇಶದ್ರೋಹಿಗಳನ್ನು ಮಟ್ಟಹಾಕುವ ಕೆಲಸ ರಾಜ್ಯದಲ್ಲಿ ಆಗದಿರುವ ಕಾರಣ ಇಂತಹ ಘಟನೆಗಳು ಪದೇ ಪದೆ ಮರುಕಳಿಸುತ್ತಿದೆ. ರಾಜ್ಯದಲ್ಲಿ ಕಾನೂನಿನ ಭಯ ಇಲ್ಲದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಕಿಡಿಕಾರಿದ್ದಾರೆ.

