ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್ ಗಳಿಗೆ ಶುಲ್ಕ ಹೆಚ್ಚಳ ಮಾಡಿರುವ ಕರ್ನಾಟಕ ರಾಜ್ಯ ಸರ್ಕಾರದ ನಡೆಯನ್ನು ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ತೀವ್ರವಾಗಿ ಖಂಡಿಸಿದೆ.
ಖಾಸಗಿ ಅನುದಾನರಹಿತ ಕಾಲೇಜುಗಳಲ್ಲಿನ ಸರ್ಕಾರಿ ಸೀಟುಗಳ ಶುಲ್ಕವನ್ನು ಶೇ 7.5ರಷ್ಟು ಹೆಚ್ಚಿಸಲಾಗಿದೆ. ಸರ್ಕಾರಿ ಕಾಲೇಜುಗಳ ಶುಲ್ಕವನ್ನು ಶೇ 5ರಷ್ಟು ಹೆಚ್ಚಿಸಲಾಗಿದೆ.
ಶುಲ್ಕಗಳನ್ನು ಹೆಚ್ಚಿಸುವುದೇ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಕಾರ್ಯವೈಕರಿಯಾಗಿದೆ. ರೈತ, ಕಾರ್ಮಿಕರು ಸೇರಿದಂತೆ, ನಾಡಿನ ಜನರು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಶುಲ್ಕಗಳನ್ನು ಹೆಚ್ಚಿಸಿದೆ.
ಕರ್ನಾಟಕ ರಾಜ್ಯ ಸರ್ಕಾರವು ಕೂಡಲೇ ತನ್ನ ವಿದ್ಯಾರ್ಥಿ ವಿರೋಧಿ ಹಾಗೂ ಜನ ವಿರೋಧಿ ನಿಲುವನ್ನು ಕೈಬಿಟ್ಟು ಶುಲ್ಕಗಳನ್ನು ಕಡಿತಗೊಳಿಸಬೇಕೆಂದು ಎಐಡಿಎಸ್ಓ ಜಿಲ್ಲಾ ಮುಖಂಡ ಕೆ.ಈರಣ್ಣ ಆಗ್ರಹಿಸಿದ್ದಾರೆ.