ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಯಲಹಂಕ ನಗರದಲ್ಲಿರುವ ವಾಯು ನೆಲೆಯಲ್ಲಿ ಏರ್ ಶೋ ನಡೆಯುತ್ತಿರುವ ಕಾರಣ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಆಗಿ, ವಾಹನ ಸವಾರರು ಪರದಾಡುವಂತಾಗಿದೆ.
ಬಾಗಲೂರು ಕ್ರಾಸ್ ಸ್ಕೈ ವಾಕ್ ಬಳಿ ಆ್ಯಂಬುಲೆನ್ಸ್ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿತ್ತು. ಆ್ಯಂಬುಲೆನ್ಸ್ ಟ್ರಾಫಿಕ್ನಲ್ಲಿ ಸಿಲುಕಿದ್ದರೂ ಪೊಲೀಸರು ನಿರ್ಲಕ್ಷ್ಯ ವಹಿಸಿದ ಆರೋಪ ಕೇಳಿ ಬಂದಿದೆ.
ಅಡ್ಡಲಾಗಿ ನಿಂತಿದ್ದ ವಾಹನಗಳನ್ನು ಮುಂದಕ್ಕೆ ಕಳುಹಿಸದೆ, ಆ್ಯಂಬುಲೆನ್ಸ್ಗೆ ದಾರಿ ಮಾಡಿಕೊಡದೆ ಸಂಚಾರಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನಲಾಗಿದೆ.