ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ದಾವಣಗೆರೆ ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಮೂರನೇ ಸೆಮಿಸ್ಟರ್ ಫಲಿತಾಂಶ ಪ್ರಕಟಗೊಂಡಿದ್ದು, ಹಿರಿಯೂರು ನಗರದ ವೇದಾವತಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಐಶ್ವರ್ಯ ವಾಣಿಜ್ಯಶಾಸ್ತ್ರದಲ್ಲಿ ೫೮೬ ಅಂಕಗಳೊಂದಿಗೆ ಶೇಕಡಾ ೮೬% ಅಂಕ ಪಡೆದು ಮೂರನೇ ಸೆಮಿಸ್ಟರ್ ನಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುವುದು ಸಂತಸದ ವಿಷಯವಾಗಿದೆ ಎಂದು ಉಪನ್ಯಾಸಕ ನಾಗರಾಜ್ ಟಿ.ವಿ ಹೇಳಿದ್ದಾರೆ.
ಬಡತನ ಕುಟುಂಬದಲ್ಲಿ ಹುಟ್ಟಿ ಸತತ ಪರಿಶ್ರಮದಿಂದ ಓದಿ, ಕಾಲೇಜಿಗೆ ಪ್ರಥಮ ಸ್ಥಾನ ಪಡೆದು, ಸಾಧನೆ ಮಾಡುವ ಮೂಲಕ ವೇದಾವತಿ ಪ್ರಥಮ ದರ್ಜೆ ಕಾಲೇಜಿಗೆ ಕೀರ್ತಿ ತಂದಿರುವ ವಿದ್ಯಾರ್ಥಿನಿ ಐಶ್ವರ್ಯಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಉಪನ್ಯಾಸಕರು ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.