ವೀಳ್ಯದೆಲೆ ಬೆಳೆಗಾರರಿಗೆ ತಲಾ 0.5 ಗುಂಟೆ ಜಾಗ ನೀಡಿಕೆ

News Desk

ಚಂದ್ರವಳ್ಳಿ ನ್ಯೂಸ್, ಮೈಸೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಅಶೋಕಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ 245 ವೀಳ್ಯದೆಲೆ ಬೆಳೆಗಾರರಿಗೆ ತಲಾ 0.5 ಗುಂಟೆ ಜಾಗ ನೀಡುವ ಕಾರ್ಯಕ್ಕೆ ಚಾಲನೆ ನೀಡಿದರು.

ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೊಡ್ಡಗರಡಿ, ಚಿಕ್ಕಗರಡಿ ಆವರಣಗಳಲ್ಲಿ ವ್ಯಾಯಾಮ ಶಾಲೆ, ಸಭಾಭವನ, ವಾಣಿಜ್ಯ ಸಂಕೀರ್ಣ ನಿರ್ಮಾಣ, ದುರಸ್ಥಿಗೊಂಡ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

 ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಶಾಸಕರಾದ ಶ್ರೀವತ್ಸ, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಶ್ರೀ ಜ್ಞಾನ ಪ್ರಕಾಶ್ ಸ್ವಾಮೀಜಿ, ವಿಧಾನ‌ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ ಸೇರಿ ಹಲವು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

 

 

 

- Advertisement -  - Advertisement - 
Share This Article
error: Content is protected !!
";