ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜ್ಞಾನ, ಸ್ವಾಭಿಮಾನ, ಮಾನವೀಯತೆಯ ಮಹಾ ಸಂಗಮವಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನದ ನಿಮಿತ್ತ ಆ ದಿವ್ಯಚೇತನಕ್ಕೆ ಅನಂತ ನಮನಗಳನ್ನು ಕೇಂದ್ರದ ಉಕ್ಕು ಮತ್ತು ಭಾರಿ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದಾರೆ.
ಜಗತ್ತಿನಲ್ಲಿಯೇ ಭಾರತಕ್ಕೆ ಶ್ರೇಷ್ಠ ಸಂವಿಧಾನವನ್ನು ನೀಡಿದ ಬಾಬಾ ಸಾಹೇಬ್ ಅವರನ್ನು ಸ್ಮರಿಸುವುದರ ಜತೆಗೆ, ಅವರ ಆದರ್ಶ ಹಾಗೂ ಸಮಾನತೆಯ ತತ್ವವನ್ನು ನಾವೆಲ್ಲರೂ ಆಚರಿಸೋಣ ಎಂದು ಅವರು ತಿಳಿಸಿದ್ದಾರೆ.