ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಗೋನೂರು ಸಮೀಪವಿರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರ ೧೩೪ ನೇ ಜಯಂತಿಯನ್ನು ಆಚರಿಸಲಾಯಿತು.
ಬಾಲ್ಯದಿಂದಲೆ ಅಂಬೇಡ್ಕರ್‌ರವರು ಸಾಕಷ್ಟು ಅವಮಾನ, ಹಿಂಸೆ, ಅಸ್ಪೃಶ್ಯತೆಯನ್ನು ಅನುಭವಿಸಿ ಸಂವಿಧಾನ ರಚಿಸಿ ದೇಶಕ್ಕೆ ಕೊಡುಗೆಯಾಗಿ ನೀಡಿದ್ದರ ಪರಿಣಾಮವಾಗಿ ಎಲ್ಲಾ ಜಾತಿ ಧರ್ಮದವರು ಸಮಾನವಾಗಿ ಬಾಳಲು ಅವಕಾಶ ಸಿಕ್ಕಿದೆ.
ಪ್ರತಿಯೊಬ್ಬರು ಡಾ.ಬಿ.ಆರ್.ಅಂಬೇಡ್ಕರ್‌ರವರ ಆಸೆಯಂತೆ ಶಿಕ್ಷಣ, ಸಂಘಟನೆ, ಹೋರಾಟಕ್ಕೆ ಗಮನ ಕೊಡಬೇಕೆಂದು ನಿರಾಶ್ರಿತರ ಪರಿಹಾರ ಕೇಂದ್ರದ ಅಧೀಕ್ಷಕ ಮಹದೇವಯ್ಯ ತಿಳಿಸಿದರು.
ಅಂಬೇಡ್ಕರ್ ಜಯಂತಿ ಅಂಗವಾಗಿ ಪರಿಹಾರ ಕೇಂದ್ರದಲ್ಲಿನ ನಿರಾಶ್ರಿತರಿಗೆ ಸಹಿ ಊಟ ಬಡಿಸಲಾಯಿತು.