ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಉಪ ರಾಷ್ಟ್ರಪತಿ ಜಗದೀಪ ಧನಕರ್ ಹಾಗೂ ಪ್ರಧಾನಿಮಂತ್ರಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ಸಂಸತ್ ಭವನದ ಆವರಣದಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ
ಮಹಾ ಪರಿನಿರ್ವಾಣ ದಿನ ಕಾರ್ಯಕ್ರಮದಲ್ಲಿ ಕೇಂದ್ರದ ಉಕ್ಕು ಮತ್ತು ಭಾರಿ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪಾಲ್ಗೊಂಡು ಆ ಮಹಾನ್ ಚೇತನಕ್ಕೆ ಪ್ರಣಾಮಗಳನ್ನು ಅರ್ಪಿಸಿದರು.
ಈ ಸಂದರ್ಭದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೊವಿಂದ್, ಲೋಕಸಭೆ ಸಭಾಧ್ಯಕ್ಷರಾದ ಓಂ ಬಿರ್ಲಾ, ರಾಜ್ಯಸಭೆ ಉಪ ಸಭಾಪತಿ ಹರಿವಂಶ ನಾರಾಯಣ ಸಿಂಗ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಪುಟದ ಸಹೋದ್ಯೋಗಿ ಮಿತ್ರರಾದ ಕಿರಣ್ ರಿಜಿಜು, ವೀರೇಂದ್ರ ಕುಮಾರ್, ಡಾ.ಜಿತೇಂದ್ರ ಸಿಂಗ್, ರಾಮದಾಸ್ ಅತವಳೆ, ಅರುಣರಾಮ್ ಮೇಘವಾಲ್ ಮುಂತಾದವರು ಉಪಸ್ಥಿತರಿದ್ದರು.