“ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ದೃಷ್ಟಿಕೋನ” ವಿಚಾರಸಂಕಿರಣ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ  ಮಾಧ್ಯಮ ಅಕಾಡೆಮಿ ವತಿಯಿಂದ ಚಿತ್ರದುರ್ಗ ಪತ್ರಕರ್ತರ ಭವನದ ಡಾ. ಬಿ.ಆರ್.‌ಅಂಬೇಡ್ಕರ್‌ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಎಸ್‌.ಸಿ. ಎಸ್‌.ಟಿ. ಪತ್ರಿಕಾ ಸಂಪಾದಕರ ಸಂಘ ಹಾಗೂ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಆಗಸ್ಟ್‌30 ರಂದು ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ದೃಷ್ಟಿಕೋನಎಂಬ ವಿಷಯದ ಕುರಿತು ಒಂದು ದಿನದ ವಿಚಾರ ಸಂಕಿರಣ ಆಯೋಜಿಸಲಾಗಿದೆ.

ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಖಾತೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್‌ಅವರು ವಿಚಾರ ಸಂಕಿರಣ ಉದ್ಘಾಟಿಸಲಿದ್ದಾರೆ.

- Advertisement - 

ಡಾ. ಬಿ.ಆರ್.‌ಅಂಬೇಡ್ಕರ್‌ಅವರ ಕ್ರಾಂತಿಕಾರಿ ಚಿಂತನೆಗಳು, ಇಂದಿನ ದಿನದಲ್ಲಿಯೂ ಅವುಗಳ ಪ್ರಸ್ತುತತೆ, ಪತ್ರಕರ್ತರಾಗಿ ಅವರ ಕೊಡುಗೆ ಮತ್ತು ಎಲ್ಲರನ್ನು ಒಳಗೊಂಡ ಸಮಾಜ ನಿರ್ಮಾಣಕ್ಕೆ ಮುಂದಿನ ಹಾದಿ ಮುಂತಾದ ವಿಷಯಗಳ ಚರ್ಚೆಗೆ ಈ ವಿಚಾರ ಸಂಕಿರಣವು ವೇದಿಕೆಯಾಗಲಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ತಿಳಿಸಿದ್ದಾರೆ.

ಹಿರಿಯ ಪತ್ರಕರ್ತ ಡಿ. ಉಮಾಪತಿ ಅವರು ದಿಕ್ಸೂಚಿ ಭಾಷಣ ಮಾಡುವರು. ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್‌, ಸಂಸದ ಗೋವಿಂದ ಎಂ. ಕಾರಜೋಳ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

- Advertisement - 

ಈ ವಿಚಾರ ಸಂಕಿರಣದಲ್ಲಿ ಅಂಬೇಡ್ಕರ್‌ಅವರ ಪತ್ರಿಕಾ ವೃತ್ತಿವಿಷಯದ ಕುರಿತು ಪತ್ರಕರ್ತ ಎನ್.‌ರವಿಕುಮಾರ್‌, “ಪತ್ರಕರ್ತರಾಗಿ ಅಂಬೇಡ್ಕರ್‌ಅವರ ಬರವಣಿಗೆಗಳುವಿಷಯದ ಕುರಿತು ವಿ.ಎಲ್.‌ನರಸಿಂಹಮೂರ್ತಿ, “ಅಂಬೇಡ್ಕರ್‌ದೃಷ್ಟಿಯಲ್ಲಿ ಲಿಂಗಸಮಾನತೆಕುರಿತು ಡಾ. ಭಾರತಿದೇವಿ ಹಾಗೂ ಪತ್ರಕರ್ತರಲ್ಲಿ ಸಾಮಾಜಿಕ ನ್ಯಾಯದ ಪ್ರಜ್ಞೆ ವಿಷಯದ ಕುರಿತು ರಿಷಿಕೇಶ್‌ಬಹದ್ದೂರ್‌ದೇಸಾಯಿ ವಿಷಯ ಮಂಡಿಸಲಿದ್ದಾರೆ. ಹಿರಿಯ ಪತ್ರಕರ್ತ ಸನತ್‌ಕುಮಾರ್‌ಬೆಳಗಲಿ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಪತ್ರಕರ್ತರು ಹಾಗೂ ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಈ ಮೂಲಕ ಸಂಘಟಕರು ಮನವಿ ಮಾಡಿದ್ದಾರೆ.

 

Share This Article
error: Content is protected !!
";