ನಿರೀಕ್ಷಕರ ಹುದ್ದೆಗಳ ಭಾಷಾ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರವೇಶ ಪತ್ರ ಲಭ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗವು 2024 ನೇ ಮಾರ್ಚ್ 14 ರಂದು ಅಧಿಸೂಚಿಸಲಾದ ಸಾರಿಗೆ ಇಲಾಖೆಯಲ್ಲಿನ ಗ್ರೂಪ್ ಸಿವೃಂದದ ಮೋಟಾರು ವಾಹನ ನಿರೀಕ್ಷಕರು – 70 ಉಳಿಕೆ ಮೂಲ ವೃಂದದಲ್ಲಿನ ಹುದ್ದೆಗಳಿಗೆ 2025ನೇ ಮೇ 13 ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಮೇ 14 ರಂದು ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಆಯೋಗದ ಅಂತರ್ಜಾಲ http://kpsc.kar.in   ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಸದರಿ ಪರೀಕ್ಷೆಯ ವೇಳಾಪಟ್ಟಿಯು ಆಯೋಗದ ಅಂತರ್ಜಾಲದಲ್ಲಿ ಲಭ್ಯವಿರುತ್ತದೆ ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article
error: Content is protected !!
";