ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಒಕ್ಕಲಿಗ ಸಂಘದ ವತಿಯಿಂದ 2024-25ನೇ ಸಾಲಿನಲ್ಲಿ ಅತ್ಯುನ್ನತ ದರ್ಜೆಯಲ್ಲಿ ಪಾಸಾದ ಒಕ್ಕಲಿಗರು, ಹಳ್ಳಿಕಾರ, ಕುಂಚಿಟಿಗ ಸಮುದಾಯಗಳ ವಿದ್ಯಾರ್ಥಿಗಳಿಗೆ ಐದು ಸಾವಿರ ನಗದು ಸೇರಿದಂತೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ. ಇದಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ 95ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ, ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕರು ಹಾಗೂ ದಂತ ವೈದ್ಯಕೀಯ ಮಹಾವಿದ್ಯಾಲಯದ ಅಧ್ಯಕ್ಷರಾದ ಬೇತೂರುಪಾಳ್ಯ ಜೆ.ರಾಜು ಇವರನ್ನು 94489-79429, 83103-26669 ಮೊಬೈಲ್ ಸಂಪರ್ಕಿಸಲು ಕೋರಿದ್ದಾರೆ.
ಹೆಚ್ಚಿನ ವಿವರಗಳು:
ಪ್ರತಿಭಾ ಪುರಸ್ಕಾರವು ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಗೆ ಅಂದರೆ ಒಕ್ಕಲಿಗ, ಹಳ್ಳಿಕಾರ, ಕುಂಚಿಟಿಗ ಸಮಾಜದ ವಿದ್ಯಾರ್ಥಿಗಳಿಗೆ ನೀಡಲಾಗುವ ಒಂದು ಪ್ರೋತ್ಸಾಹಧನವಾಗಿದೆ.
ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ 95ರಷ್ಟು ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗುರುತಿಸಿ ನಗದು ನೀಡಿ, ಗೌರವಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಜುಲೈ-25 ರಂದು ಕೊನೆ ದಿನಾಂಕ. ಅರ್ಜಿ ಜೊತೆಯಲ್ಲಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ಹಾಗೂ ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸುವಂತೆ ಜೆ.ರಾಜು ಮನವಿ ಮಾಡಿದ್ದರು.