ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ
ವಿಶ್ವ ವಿಕಲಚೇತನರ ದಿನಾಚರಣೆಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ವತಿಯಿಂದ 2025ರ ಡಿಸೆಂಬರ್ 03 ರಂದು ಬೆಂಗಳೂರಿನಲ್ಲಿ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದ ಸಂಸ್ಥೆಗಳಿಗೆ, ವಿಶೇಷ ಶಿಕ್ಷಕರಿಗೆ ಮತ್ತು ವೈಯಕ್ತಿಕ ಪ್ರಶಸ್ತಿಗಳನ್ನು ರಾಜ್ಯ ಮಟ್ಟದಲ್ಲಿ ಇಲಾಖಾ ಸಚಿವರ ಅಧ್ಯಕ್ಷತೆಯಲ್ಲಿನ ಸಮಿತಿಯಲ್ಲಿ ಆಯ್ಕೆ ಮಾಡಿ ವಿಶ್ವ ವಿಕಲಚೇತನ ದಿನಾಚರಣೆಯಂದು ಪ್ರದಾನ ಮಾಡಲಾಗುವುದು.
ಚಿತ್ರದುರ್ಗ ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರವ ವಿಶೇಷ ಶಿಕ್ಷಕರ ವಿಭಾಗ, ವೈಯಕ್ತಿಕ ವಿಭಾಗ, ಮತ್ತು ಸಂಸ್ಥೆಗಳ ವಿಭಾಗದಲ್ಲಿ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿರುತ್ತದೆ. ಜಿಲ್ಲಾ ಕಛೇರಿಯಿಂದ ಅರ್ಜಿ
ನಮೂನೆಗಳನ್ನು ಪಡೆದು ದಿನಾಂಕ:15-10-2025 ರೊಳಗಾಗಿ ಪೂರ್ಣ ವಿವರವನ್ನು ಕನ್ನಡದಲ್ಲಿಯೇ ಭರ್ತಿ ಮಾಡಿ, ಭರ್ತಿ ಮಾಡಿದ ಅರ್ಜಿ ನಮೂನೆ ಹಾಗೂ ಪ್ರಸ್ತಾವನೆಯನ್ನು ದ್ವಿ-ಪ್ರತಿಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸ್ಟೇಡಿಯಂ ಹತ್ತಿರ, ಬಾಲಭವನ ಆವರಣ, ಚಿತ್ರದುರ್ಗ ಈ ಕಛೇರಿಗೆ ಸಲ್ಲಿಸುವುದು.
ತಡವಾಗಿ ಬಂದಂತಹ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸ್ಟೇಡಿಯಂ ಹತ್ತಿರ, ಬಾಲಭವನ ಆವರಣ, ಚಿತ್ರದುರ್ಗ ಕಛೇರಿ ದೂರವಾಣಿ ಸಂ: 08194-235284 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

